ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆ ಸಂಪನ್ನವಾದ ಬಳಿಕ ಏ.20ರಂದು ಸಂಪ್ರೋಕ್ಷಣೆ ಮತ್ತು ರಾತ್ರಿ ಮಂತ್ರಾಕ್ಷತೆ ವಿತರಣೆ ನಡೆಯಿತು.
ದೇವಳದಲ್ಲಿ ರಾತ್ರಿ ಪೂಜೆಯ ಬಳಿಕ ದೇವಳದ ಸತ್ಯ ಧರ್ಮ ನಡೆಯಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರು ಮಂತ್ರಾಕ್ಷತೆಯನ್ನು ಭಕ್ತರಿಗೆ ವಿತರಿಸಿದರು.ಇದೇ ಸಂರ್ಭದಲ್ಲಿ ದೇವರ ನಿತ್ಯ ಬಲಿ ಉತ್ಸವ, ವಸಂತ ಕಟ್ಟೆಯಲ್ಲಿ ವಸಂತ ಪೂಜೆ ನಡೆಯಿತು.ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಮಾಜಿ ಸದಸ್ಯ ಎನ್.ಕೆ.ಜಗನ್ನಿವಾಸ ರಾವ್, ದೇವಳದ ಆಡಳಿತಾಧಿಕಾರಿ ಹನುಮ ರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಉತ್ಸವ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಸದಸ್ಯರು ಹಾಗು ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಮಾಜಿ ಸದಸ್ಯರು, ಹಿರಿಯರಾದ ಕಿಟ್ಟಣ್ಣ ಗೌಡ, ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ಪಿ.ಜಿ.ಚಂದ್ರಶೇಖರ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.ದೇವಳದ ಪೂಜೆಯ ಆರಂಭದಲ್ಲಿ ಜಾತ್ರೋತ್ಸವದಲ್ಲಿ ವಿವಿಧ ಸೇವಾ ಕಾರ್ಯ ನೆರವೇರಿಸಿದ್ದ ದೇವಳದ ಅರ್ಚಕರು, ಪರಿಚಾರಕ ವರ್ಗಕ್ಕೆ ಸಂಪ್ರದಾಯದಂತೆ ಹೊಸ ಬಟ್ಟೆಗಳನ್ನು ದೇವಳದ ಆಡಳಿತಾಧಿಕಾರಿ ಹನುಮ ರೆಡ್ಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ವಿತರಿಸಿದರು. ವಸಂತ ಪೂಜೆಯ ಪ್ರಸಾದವನ್ನು ದೇವಳದ ಗೋಪುರದಲ್ಲಿ ವಿತರಿಸಲಾಯಿತು.