ವರುಣನ ಕೃಪೆ, ಲೋಕಕಲ್ಯಾಣಾರ್ಥ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರುಣನ ಕೃಪೆ, ಲೋಕಕಲ್ಯಾಣಾರ್ಥ ಸೀಯಾಳಾಭಿಷೇಕ ನಡೆಯಿತು.


ವರುಣನ ಕೃಪೆಗಾಗಿ ಎಲ್ಲಾ ದೇವಸ್ಥಾನಗಳಲ್ಲಿ ಸೀಯಾಳಾಭಿಷೇಕ ಮಾಡುವ ಕುರಿತು ಶಾಸಕ ಅಶೋಕ್ ಕುಮಾರ್ ಅವರ ಸಂಕಲ್ಪದಂತೆ ಮಹಾಲಿಂಗೇಶ್ವರ ದೇವಳದಲ್ಲಿ ನಡೆದ ಸೀಯಾಳಾಭಿಷೇಕದ ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಲೋಕದ ಸುಭೀಕ್ಷೆಗಾಗಿ ಪ್ರಾರ್ಥನೆ ಮಾಡಿದರು. ಈ ಸಂದರ್ಭ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ.ಜಗನ್ನಿವಾಸ ರಾವ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ, ದಿನೇಶ್ ಪಿ.ವಿ, ಅಮರನಾಥ ಗೌಡ ಬಪ್ಪಳಿಗೆ, ಮಹಾಲಿಂಗೇಶ್ವರ ಭಜನಾ ಮಂಡಳಿಯ ಸಂಚಾಲಕ ಗೋಪಾಲಕೃಷ್ಣ,ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here