ಸುಡು ಬಿಸಿಲಿನಲ್ಲೂ ಸಹಸ್ರ ಸಹಸ್ರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಪುತ್ತೂರಿನಲ್ಲಿ ಅಣ್ಣಾ ಮಲೈ ರೋಡ್ ಶೋ

0

ಪುತ್ತೂರು: ಲೋಕಸಭಾ ಚುನಾವಣೆ -2024ರಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರವಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕೊಯಮುತ್ತೂರು ಬಿಜೆಪಿ ಅಭ್ಯರ್ಥಿಯಾಗಿರುವ ಅಣ್ಣಾಮಲೈ ಅವರಿಂದ ಎ.23ಕ್ಕೆ ಪುತ್ತೂರಿನ ದರ್ಬೆಯಿಂದ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ತನಕ ಬೃಹತ್ ರೋಡ್ ಶೋ ನಡೆಯಿತು. ಸುಡು ಬಿಸಿಲಿನ ಮಧ್ಯೆಯು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ರೋಡ್ ಶೋ ನಲ್ಲಿ ಪಾಲ್ಗೊಂಡರು.


ಅಣ್ಣಾ ಮಲೈ ಅವರ ಜೊತೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಚುನಾವಣ ಉಸ್ತುವಾರಿ ಸುಲೋಚನಾ ಭಟ್, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ನಿತೀಶ್ ಕುಮಾರ್ ಶಾಂತಿವನ ಸಹಿತ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡರು.

LEAVE A REPLY

Please enter your comment!
Please enter your name here