ಪುತ್ತೂರು:ಏ.26ರಂದು ದ.ಕ.ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿ ನಡೆದ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ 81.10 ಮತದಾನವಾಗಿದೆ.ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 1,06,418 ಪುರುಷರು ಹಾಗೂ 1,10,257 ಮಹಿಳಾ ಮತದಾರರು ಸೇರಿದಂತೆ ಒಟ್ಟು 2,16,675 ಮಂದಿ ಮತ ಚಲಾಯಿಸುವ ಹಕ್ಕು ಪಡೆದಿದ್ದರು.
2019ರ ಲೋಕಸಭಾ ಚುನಾವಣೆಗೆ ಹೋಲಿಕೆ ಮಾಡಿದರೆ ಈ ಬಾರಿ 12,243 ಮಂದಿ ಹೊಸ ಮತದಾರರು ಮತ ಚಲಾಯಿಸುವ ಹಕ್ಕು ಪಡೆದುಕೊಂಡಿದ್ದರು.2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ 94,230 ಪುರುಷ ಹಾಗೂ 92,079 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,86,309 ಮಂದಿ ಮತದಾರರು ಪಟ್ಟಿಯಲ್ಲಿದ್ದರು.2023ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಹೋಲಿಕೆ ಮಾಡಿದರೆ 3,922 ಮಂದಿ ಹೊಸ ಮತದಾರರು ತಮ್ಮ ಹಕ್ಕು ಚಲಾವಣೆಗೆ ಅರ್ಹತೆ ಪಡೆದುಕೊಂಡಿದ್ದರು.
ಚುನಾವಣೆ ಮುಗಿದು ಡಿಮಸ್ಟರಿಂಗ್ ಕಾರ್ಯ ಪೂರ್ಣಗೊಂಡ ಬಳಿಕ ಅಧಿಕಾರಿ, ಸಿಬ್ಬಂದಿಗಳಿಗೆ ಹೋಗಲು ವಿವಿಧ ಕಡೆಗಳಿಗೆ ಬಸ್ಸುಗಳ ವ್ಯವಸ್ಥೆ ಮಾಡಲಾಗಿತ್ತು.ಈ ಕುರಿತು ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ಅವರು ಉದ್ವೇಷಣೆ ಮಾಡುತ್ತಿದ್ದರು.ಮಾಹಿತಿ ಕೇಂದ್ರದಲ್ಲಿಯೂ ಅವರು ಉದ್ವೇಷಕರಾಗಿ ಕಾರ್ಯನಿರ್ವಹಿಸಿದ್ದರು.