ಪುತ್ತೂರು: ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗದ ದಂಡಾಧಿಕಾರಿಯವರು ಹೊರಡಿಸಿದ್ದ ಎ.ಆರ್. ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಅವರಿಗೆ ಗಡಿಪಾರು ಆದೇಶಕ್ಕೆ ನ್ಯಾಯಾಲಯ ತಡೆ ನೀಡಿದೆ.
ಪ್ರಜ್ವಲ್ ರೈ ಪಾತಾಜೆಯವರ ವಿರುದ್ಧ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಕುರಿತಾಗಿ ಪ್ರಕರಣಗಳು ದಾಖಲಾಗಿದ್ದು, ರಾಜಕೀಯ ಪಕ್ಷವೊಂದರಲ್ಲಿಯೂ ಗುರುತಿಕೊಂಡಿದ್ದಾರೆ.
ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 55ರಂತೆ ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಅವರನ್ನು ಗಡಿಪಾರು ಮಾಡಲು ಶಿಫಾರಸ್ಸು ಮಾಡಲಾಗಿತ್ತು. ಇದರ ವಿರುದ್ಧ ಪ್ರಜ್ವಲ್ ರೈ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರು ಆದೇಶಕ್ಕೆ ತಡೆ ನೀಡಿದೆ. ಪ್ರಜ್ವಲ್ ರೈ ಪರ ಪುತ್ತೂರಿನ ನ್ಯಾಯವಾದಿಗಳಾದ ಧನಂಜಯ ಕುಮಾರ್ ಮತ್ತು ಚಿನ್ಮಯ್ ರೈ ಈಶ್ವರಮಂಗಲ ವಾದಿಸಿದ್ದರು.