ನೆಲ್ಯಾಡಿ: ಮಕ್ಕಳ ಬೇಸಿಗೆ ಶಿಬಿರ ಸಮಾರೋಪ

0

ನೆಲ್ಯಾಡಿ: ಇಲ್ಲಿನ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಜೇಸಿಐ ನೆಲ್ಯಾಡಿ ಆಶ್ರಯದಲ್ಲಿ ನೆಲ್ಯಾಡಿ-ಕೌಕ್ರಾಡಿ ವರ್ತಕ ಮತ್ತು ಕೈಗಾರಿಕಾ ಸಂಘದ ಸಹಯೋಗದೊಂದಿಗೆ ಒಂದು ವಾರಗಳ ಕಾಲ ಆಯೋಜಿಸಲಾದ ಮಕ್ಕಳ ಮೋಜಿನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಎ.25ರಂದು ನಡೆಯಿತು.


ನೆಲ್ಯಾಡಿ-ಕೌಕ್ರಾಡಿ ವರ್ತಕ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್.ಕೆ.ಎಸ್ ಮಾತನಾಡಿ, ವಿದ್ಯಾರ್ಥಿಗಳು ಸ್ಮಾರ್ಟ್ ಫೋನುಗಳಿಗೆ ದಾಸರಾಗದೆ ಸೃಜನಾತ್ಮಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಬೇಸಿಗೆ ಶಿಬಿರಗಳು ವಿದ್ಯಾರ್ಥಿಗಳ ಸೃಜನಾತ್ಮಕ ಚಟುವಟಿಕೆಗಳಿಗೆ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಇರುವಾಗಲೇ ತಮ್ಮ ಕೆಲಸಗಳನ್ನು ತಾವೇ ಮಾಡಿಕೊಳ್ಳಲು ಕಲಿಯಲು ಈ ಶಿಬಿರಗಳು ಸಹಾಯಕವಾಗುತ್ತದೆ ಎಂದರು. ಜೇಸಿಐ ಅಧ್ಯಕ್ಷೆ ಸುಚಿತ್ರಾ ಜೆ.ಬಂಟ್ರಿಯಾಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ನೆಲ್ಯಾಡಿ ಜೇಸಿಐ ಪೂರ್ವಾಧ್ಯಕ್ಷ ಜಯಾನಂದ ಬಂಟ್ರಿಯಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂರ್ವಾಧ್ಯಕ್ಷ ರವೀಂದ್ರ ಟಿ., ಜೆಜೆಸಿ ಅಧ್ಯಕ್ಷ ಶಮಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು. ಶಿಬಿರದ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕಿ ಭಾಗ್ಯಶ್ರೀ, ಮಾನ್ಯ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ಜೇಸಿ ಅಧ್ಯಕ್ಷೆ ಲೀಲಾ ಮೋಹನ್ ವಂದಿಸಿದರು.

LEAVE A REPLY

Please enter your comment!
Please enter your name here