ಪುತ್ತೂರು: ನೆಹರುನಗರದ ನೂತನ ರೈಲ್ವೇ ಮೇಲ್ಸೆತುವೆಯನ್ನು ಸಾಂಕೇತಿಕವಾಗಿ ಉದ್ಘಾಟಿಸಲಾಗಿದೆ. ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಮಾರಂಭವಿಲ್ಲದೇ ರೈಲ್ವೆ ಮೇಲ್ಸೇತುವೆಯನ್ನು ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್ ನೇತೃತ್ವದಲ್ಲಿ ಸಾಂಕೇತಿಕವಾಗಿ ಉದ್ಘಾಟಿಸಲಾಗಿದೆ.
ಇದೇ ವೇಳೆ ಸೇತುವೆ ಕಾಮಗಾರಿಯನ್ನು ನಿರ್ವಹಿಸಿದ ಧಾತ್ರಿ ಕನ್ಸ್ಟ್ರಕ್ಷನ್ ಸಂಸ್ಥೆಯ ತಿರುಪ್ಪಾಲ್ ರೆಡ್ಡಿ ಅವರನ್ನು ಗೌರವಿಸಲಾಯಿತು. ಮೇ.1ರಿಂದ ಈ ಮೇಲ್ಸೆತುವೆ ಸಂಚಾರಕ್ಕೆ ಮುಕ್ತವಾಗಲಿದೆ. ಈ ಸಂದರ್ಭದಲ್ಲಿ ಹಲವು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಹಲವು ವರ್ಷಗಳ ಬೇಡಿಕೆ ಈಡೇರಿದ್ದು ಪಾದಚಾರಿಗಳಿಗೆ, ವಾಹನ ಸವಾರರಿಗೆ ಸಂತಸ ತಂದಿದೆ.