ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಚುನಾವಣೆ ಪ್ರಕ್ರಿಯೆ ಮುಗಿದ ಹಿನ್ನಲೆಯಲ್ಲಿ ಪುತ್ತೂರು ವಿಧಾಸಭಾ ಕ್ಷೇತ್ರದಲ್ಲಿ ಕೆಲವೊಂದು ನೀತಿ ಸಂಹಿತೆ ಸಡಿಲಗೊಳಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಪುತ್ತೂರು ಉಪ ವಿಭಾಗದ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು.
ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಎಸಿ ಕೋರ್ಟ್ ಹಾಲ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಚುನಾವಣೆ ಮುಗಿದರೂ ನೀತಿ ಸಂಹಿತೆ ಮುಂದುವರಿಯುತ್ತದೆ .ಖಾಸಗಿ ಕಾರ್ಯಕ್ರಮಕ್ಕೆ ಅನುಮತಿ ಬೇಡ. ನಮಗೆ ಮಾಹಿತಿ ನೀಡಬೇಕು. ಆದರೆ ರಾಜಕೀಯ ಕಾರ್ಯಕ್ರಮಕ್ಕೆ ಅನುಮತಿ ಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

ಅದೆ ರೀತಿ ಈಶ್ವರಮಂಗಲದಲ್ಲಿ ಚೆಕ್ ಪೋಸ್ಟ್ ಮುಂದುವರಿಯುತ್ತದೆ. ಚುನಾವಣೆ ಉತ್ತಮ ರೀತಿಯಲ್ಲಿ ನಡೆದಿದೆ. ಚುನಾವಣೆ ಯಶಸ್ವಿಯಾಗಿ ನಡೆಯಲು ಕಾರಣಕರ್ತರಾದ ಸಿಬ್ಬಂದಿಗಳು, ಮತದಾರರು ಮತ್ತು ಮಾದ್ಯಮ ಪ್ರತಿನಿಧಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ತಹಸೀಲ್ದಾರ್ ಕುಂಞಿ ಅಹಮ್ಮದ್ ಉಪಸ್ಥಿತರಿದ್ದರು.