ಎಂಡಿಎಂ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ-16,13,800 ರೂ. ಮೌಲ್ಯದ ಸೊತ್ತು ವಶಕ್ಕೆ-ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ

0

ಮಂಗಳೂರು: ಮಂಗಳೂರು ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನಿರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು  ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 

ಉಳ್ಳಾಲ ಬಸ್ತಿಪಡ್ಪು ನಿವಾಸಿ ಮೊಹಮ್ಮದ್ ಇಶಾನ್ (35), ಉಳ್ಳಾಲ ನಿವಾಸಿ ಜಾಫರ್ ಸಾಧಿಕ್ (35) ಬಂಧಿತ ಆರೋಪಿಗಳು .ಆರೋಪಿಗಳು ಬೆಂಗಳೂರಿನಿಂದ ಮಾದಕ ವಸ್ತುಗಳನ್ನು ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿದ್ದರು ಎನ್ನಲಾಗಿದೆ.ಬಂಧಿತರಿಂದ 9,00,000/- ರೂ. ಮೌಲ್ಯದ 407 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 16,13,800ರೂ ಎಂದು ಅಂದಾಜಿಸಲಾಗಿದೆ.

ಸಾಧಿಕ್‌ ವಿರುದ್ದ ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ, ಹಲ್ಲೆ, ಕೊಲೆಯತ್ನ ಹಾಗೂ ಕೊಡಗು ಜಿಲ್ಲೆಯ ಕುಶಾಲನಗರ ಠಾಣೆಯಲ್ಲಿ  ದರೋಡೆ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳು ಇವರ ಮೇಲೆ ದಾಖಲಾಗಿರುತ್ತವೆ.  ಮೊಹಮ್ಮದ್ ಇಶಾನ್ ಮೇಲೆ ಈ ಹಿಂದೆ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ MDMA ಮಾರಾಟ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here