ಮೇ.3: ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಉಚಿತ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರ ಉದ್ಘಾಟನೆ

0

ಪುತ್ತೂರು: ಮಿತ್ರವೃಂದ ವಾಲಿಬಾಲ್ ಅಕಾಡೆಮಿ, ದರ್ಬೆ ಲಿಟ್ಲ್ ಫ್ಲವರ್ ಹಿ.ಪ್ರಾ.ಶಾಲೆ ಹಾಗೂ ರೋಟರಿ ಬಿರುಮಲೆ ಹಿಲ್ಸ್ ಸಹಯೋಗದಲ್ಲಿ ಉಚಿತ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರದ ಉದ್ಘಾಟನೆ ಮೇ.3ರಂದು ಸಂಜೆ 4.30ರಿಂದ ಲಿಟ್ಲ್ ಫ್ಲವರ್ ಶಾಲೆಯಲ್ಲಿ ನಡೆಯಲಿದೆ. ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ವೈದ್ಯಾಧಿಕಾರಿ ದೀಪಕ್ ರೈ, ರೋಟರಿ ಕ್ಲಬ್ ಸಹಾಯಕ ಗವರ‍್ನರ್ ಪುರಂದರ ರೈ, ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ ಪೈ, ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಲಿಟ್ಲ್ ಫ್ಲವರ್ ಶಾಲೆಯ ಮುಖ್ಯಶಿಕ್ಷಕಿ ಭಗಿನಿ ವೆನಿಶ, ನಾಯರ್ ಕನ್‌ಸ್ಟ್ರಕ್ಷನ್‌ನ ಸೂರಜ್ ನಾಯರ್ ಭಾಗವಹಿಸಲಿದ್ದಾರೆ. ರೋಟರಿ ಬಿರುಮಲೆ ಹಿಲ್ಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರಿ ಪೈ ಹಾಗೂ ಕೃಷ್ಣನಾರಾಯಣ ಮುಳಿಯ ಗೌರವ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here