ಮೇ.4: ಪೆರ್ಲಂಪಾಡಿಯಲ್ಲಿ ಕೊಳ್ತಿಗೆ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಂಸಾವತಿಯವರಿಗೆ ಅಭಿನಂದನೆ, ಬೀಳ್ಕೊಡುಗೆ ಸಮಾರಂಭ

0

ಪುತ್ತೂರು: ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿವೃತ್ತಿಗೊಂಡ ಹಂಸಾವತಿ ಕೆ.ಯವರಿಗೆ ಅಭಿನಂದನೆ ಮತ್ತು ಬೀಳ್ಕೊಡುಗೆ ಸಮಾರಂಭ ಮೇ.4ರಂದು ಅಪರಾಹ್ನ 3ಕ್ಕೆ ಪೆರ್ಲಂಪಾಡಿ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿದೆ. ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ರಮಣ ಕೆ.ಎಸ್ ಸಭಾಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸನ್ಮಾನ ಕಾರ್ಯಕ್ರಮ ನೆರವೇರಿಸಲಿರುವರು. ಅತಿಥಿಗಳಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಸ್.ಬಿ.ಜಯರಾಮ ರೈ ಬಳಜ್ಜ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್, ಕೊಳ್ತಿಗೆ ಪ್ರಾ.ಕೃ.ಪ.ಸಹಕಾರಿ ಸಂಘದ ಸ್ಥಾಪಕ ಕಾರ್ಯದರ್ಶಿ ಗೋಪಾಲ ರೈ ಎಂ ಭಾಗವಹಿಸಲಿದ್ದಾರೆ. ಸಂಘದ ನಿರ್ದೇಶಕರುಗಳು, ಸದಸ್ಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೊಳ್ತಿಗೆ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ರಮಣ ಕೆ.ಎಸ್, ಉಪಾಧ್ಯಕ್ಷ ಲಕ್ಷ್ಮೀ ಕೆ.ಜಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿಜಾ ಕೆ. ಹಾಗೂ ಸಿಬ್ಬಂದಿ ವರ್ಗ ಮತ್ತು ಆಡಳಿತ ಮಂಡಳಿ ನಿರ್ದೇಶಕರು, ಸದಸ್ಯರುಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here