ಸವಣೂರು : ಮಾಂತೂರು ಬಳಿ ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿ -ಗಾಯ ,ಆಸ್ಪತ್ರೆಗೆ ದಾಖಲು

0

ಸವಣೂರು : ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಎಂಬಲ್ಲಿ, ರಸ್ತೆ ದಾಟುವ ಸಲುವಾಗಿ, ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ಮಹಿಳೆಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಬಗ್ಗೆ ವರದಿಯಾಗಿದೆ.

ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ  ಕಮಲ (60) ಗಾಯಗೊಂಡವರು.ಈ ಕುರಿತು ಕಮಲಾ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ, ಬೈಕ್ ಸವಾರ ಜಿಜೋ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

ಬೈಕ್ ಸವಾರ ಜಿಜೋ  ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಸವಾರಿ ಮಾಡಿದ ಪರಿಣಾಮ ರಸ್ತೆಯ ಅಂಚಿನಲ್ಲಿ ನಿಂತಿದ್ದ  ಕಮಲಾ ಅವರಿಗೆ ಡಿಕ್ಕಿಯಾದ ಪರಿಣಾಮ ಕಮಲಾ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಕಮಲಾ ಅವರನ್ನು  ಮಗ ಹಾಗೂ ಬೈಕ್ ಸವಾರ ಉಪಚರಿಸಿ, ಚಿಕಿತ್ಸೆಗಾಗಿ ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ.ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ: 43/2024, ಕಲಂ 279,338 ಐಪಿಸಿ ರಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here