ಉಪ್ಪಿನಂಗಡಿ ಟ್ರಾಫಿಕ್ ಜಾಮ್ ಸಮಸ್ಯೆ-ಫೀಲ್ಡಿಗಿಳಿದ ಸಂಚಾರಿ ಪೊಲೀಸರು

0

ಉಪ್ಪಿನಂಗಡಿ: ಪೇಟೆಯಲ್ಲಿ ಟ್ರಾಫಿಕ್ ಜಾಮ್‌ನ ಸಮಸ್ಯೆ ನಿತ್ಯನಿರಂತರವಾಗಿರುವ ಬಗ್ಗೆ ಪತ್ರಿಕಾ ವರದಿಯಲ್ಲಿ ತಿಳಿದುಕೊಂಡು ಉಪ್ಪಿನಂಗಡಿ ಪುತ್ತೂರು ಸಹಾಯಕ ಕಮಿಷನರ್ ಅವರು ಭೇಟಿ ನೀಡಿದ ಬೆನ್ನಲ್ಲೇ ಪೊಲೀಸರು ಕೂಡಾ ಅಲರ್ಟ್ ಆಗಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಫೀಲ್ಡ್‌ಗಿಳಿದಿದ್ದಾರೆ.


ಪುತ್ತೂರಿನ ಸಂಚಾರಿ ಠಾಣಾಧಿಕಾರಿ ಶುಕ್ರವಾರ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿದ್ದಲ್ಲದೆ, ಟ್ರಾಫಿಕ್ ನಿಯಮಗಳನ್ನು ಮೀರುವ ವಾಹನಗಳಿಗೆ ದಂಡ ವಿಧಿಸಿದ್ದಾರೆ. ಉಪ್ಪಿನಂಗಡಿ ಪೇಟೆಯೊಳಗೆ ರಸ್ತೆಯಲ್ಲೇ ಕಾರು ಸೇರಿದಂತೆ ಖಾಸಗಿ ವಾಹನಗಳನ್ನು ನಿಲ್ಲಿಸಿ ಖರೀದಿ ಪ್ರಕ್ರಿಯೆಗೆಂದು ಅಂಗಡಿ, ಮಾಲ್‌ಗಳಿಗೆ ತೆರಳುತ್ತಿರುವುದು ಟ್ರಾಫಿಕ್ ಜಾಮ್‌ಗೆ ಇನ್ನೊಂದು ಪ್ರಮುಖ ಕಾರಣವಾಗಿದೆ. ಅಂತವರ ಮೇಲೂ ದಂಡ ವಿಧಿಸಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಒತ್ತಾಯ ಕೇಳಿ ಬಂದಿದೆ.


ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಬಳಿ ಆಗಮಿಸಿದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಬಿ.ಎಸ್. ರವಿ, ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಮಾಲಕರ ಮೇಲೆ ಕಾನೂನು ಕ್ರಮ ಕೈಗೊಳ್ಳಿ. ವಾಹನಗಳ ಸುಗಮ ಸಂಚಾರಕ್ಕೆ ಸಮಸ್ಯೆಯಾದಾಗ ನನ್ನ ಗಮನಕ್ಕೂ ತನ್ನಿ. ತಾನೂ ಬರುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here