ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಉಪನ್ಯಾಸಕರಿಗೆ ಟ್ಯಾಲಿ ತರಬೇತಿ ಕಾರ್ಯಾಗಾರವು ಉದ್ಘಾಟನೆಗೊಂಡಿತು. ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸಿಟಿಕಲ್ ಸೈನ್ಸ್‌ನ ಪ್ರಾಂಶುಪಾಲ ಡಾ. ಗುರುರಾಜ ಎಂ.ಪಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ಪರ್ಧಾತ್ಮಕ ಜಗತ್ತಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಜೊತೆ ಹೊಂದಿಕೊಂಡು ಮುಂದುವರೆಯುವುದು ಅತ್ಯಗತ್ಯ. ಪದವಿಪೂರ್ವ ಹಂತದಲ್ಲೇ ವಿದ್ಯಾರ್ಥಿಗಳನ್ನು ಕೌಶಲ್ಯಪೂರ್ಣರಾಗಿಸುವ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಈ ಪ್ರಯತ್ನ ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ವಹಿಸಿದ್ದರು. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ದೇವಿಚರಣ್ ರೈ ಹಾಗೂ ಟ್ಯಾಲಿ ತರಬೇತುದಾರ ರಕ್ಷಾ ನಾಯಕ್ ಮಂಗಳೂರು ಉಪಸ್ಥಿತರಿದ್ದರು.
ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಪ್ರಸ್ತುತ ವರ್ಷದಿಂದ ವಾಣಿಜ್ಯ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಷೇರು ಮಾರುಕಟ್ಟೆ ಮತ್ತು ಟ್ಯಾಲಿ ವಿಷಯಗಳ ಬಗ್ಗೆ ಸರ್ಟಿಫಿಕೇಟ್ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಹಂತಗಳಲ್ಲಿ ಉಪನ್ಯಾಸಕರಿಗೆ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ.
ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥ ದೇವಿಪ್ರಸಾದ್ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರು ಕಾರ್ಯಕ್ರಮವನ್ನು ನಿರ್ವಹಿಸಿದರು.