ಮೇ.6: ಶಾಂತಿನಗರ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮೇ.6ರಂದು ನಡೆಯಲಿದೆ.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.6ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 9ರಿಂದ ಶ್ರೀ ಗಣಪತಿ ಹವನ, ಕಲಶಪೂಜೆ ಪ್ರಾರಂಭ, ಅಶ್ವತ್ಥ ಕಲ್ಪೋಕ್ತ ಪೂಜೆ, ಶ್ರೀ ರಕ್ತೇಶ್ವರಿ ಸಹಿತ ಪರಿವಾರ ದೈವಗಳಿಗೆ ತಂಬಿಲ, ಶ್ರೀ ನಾಗದೇವರಿಗೆ ತಂಬಿಲ, ಶ್ರೀ ಸತ್ಯನಾರಾಯಣ ಪೂಜೆ, ಕಲಶಪೂಜೆ ಮತ್ತು ಕಲಶಾಭಿಷೇಕ ನಡೆಯಲಿದೆ. ಬೆಳಿಗ್ಗೆ 10ರಿಂದ 12.30ರವರೆಗೆ ಮಡಂತ್ಯಾರು ಶ್ರುತಿಲಯ ಕ್ಲಾಸಿಕಲ್ಸ್ ಇದರ ವಿದುಷಿ ಶ್ಯಾಮಲಾ ನಾಗರಾಜ್ ಭಟ್ ಕುಕ್ಕಿಲ ಮತ್ತು ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಜರಗಲಿದೆ. ಮಧ್ಯಾಹ್ನ 12.30ರಿಂದ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದ್ದು ಅಪರಾಹ್ನ 3ರಿಂದ ಸಂಜೆ 7ರವರೆಗೆ ಆದರ್ಶನಗರ ಶ್ರೀರಾಮ ಭಜನಾ ಮಂಡಳಿ, ಉಪ್ಪಿನಂಗಡಿ ರಾಮನಗರ ಶ್ರೀ ಶಾರದಾ ಮಹಿಳಾ ಭಜನಾ ಮಂಡಳಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿ, ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂಡಳಿ ಮತ್ತು ಶಾಂತಿನಗರ ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಸೇವೆ ನಡೆಯಲಿದೆ. ರಾತ್ರಿ 7.15ರಿಂದ ಶ್ರೀ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 8ರಿಂದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ)ದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ನಂತರ ಜಿಲ್ಲೆಯ ಸುಪ್ರಸಿದ್ಧ ಆಯ್ದ ಕಲಾವಿದರ ಕೂಡುವಿಕೆಯಲ್ಲಿ ಸತೀಶ್ ಆಚಾರ್ಯ ಮಾಣಿರವರ ಸಂಯೋಜನೆಯೊಂದಿಗೆ ಶ್ರೀಕೃಷ್ಣ ಲೀಲಾಮೃತ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೇ.5ರಂದು ಹೊರೆಕಾಣಿಕೆ ಸಮರ್ಪಣೆ, ತುಲಾಭಾರ ಸೇವೆ
ಮೇ.5ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 11.30ಕ್ಕೆ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಮೈದಾನದಿಂದ ಮೆರವಣಿಗೆಯಲ್ಲಿ ಸಾಗಿ ದೇವಸ್ಥಾನಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆ, ಮಧ್ಯಾಹ್ನ 12.15ರಿಂದ ತುಲಾಭಾರ ಸೇವೆ, 1ರಿಂದ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here