ಉತ್ತರ ಕನ್ನಡ ಲೋಕಸಭಾ ಕ್ಷೇತ್ರ-ಕಾವು ಹೇಮನಾಥ ಶೆಟ್ಟಿ ತಂಡದಿಂದ ಚುನಾವಣಾ ಪ್ರಚಾರ

0

ಪುತ್ತೂರು: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮತ್ತು ಇತರರು ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆ ನಡೆಸಿದರು.


ಭಟ್ಕಳ, ಕುಮಟಾ ,ಹೊನ್ನಾವರ ಮೊದಲಾದ ಕಡೆಗಳಲ್ಲಿ ಪ್ರಚಾರ ಕಾರ್ಯ ನಡೆಸಿದರು. ಸೀಎಂ ಸಿದ್ದರಾಮಯ್ಯ, ಡಿಸೀಎಂ ಡಿಕೆ ಶಿವಕುಮಾರ್ ಭಾಗವಹಿಸಿದ ಸಾರ್ವಜನಿಕ ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಸುಳ್ಯದ ಕಾಂಗ್ರೆಸ್ ಮುಖಂಡರಾದ ವೆಂಕಪ್ಪ ಗೌಡ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,‌ಮಾಜಿ‌ ಮೇಯರ್ ಅಶ್ರಫ್ ಸಹಿತ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here