ದ.ಕ.ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಪದ್ಮರಾಜ್ ಆರ್ ಪೂಜಾರಿ ಅವರು ಬಹುಮತದಲ್ಲಿ ಗೆಲ್ಲುವಲ್ಲಿ ಯಾವುದೇ ಸಂಶಯವಿಲ್ಲ. ರಾಜ್ಯ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಗಳು ಸಾಮಾನ್ಯ ವರ್ಗದವರ ಮತ್ತು ಕೃಷಿ ಕೂಲಿ ಕಾರ್ಮಿಕರ, ಮಹಿಳೆಯರ ಮನಸ್ಸು ಗೆದ್ದಿದೆ. ಈ ಯೋಜನೆಗಳು ಕಾಂಗ್ರೆಸ್ ಕಾರ್ಯಕರ್ತರ ಅವಿರತ ಶ್ರಮದ ದುಡಿಮೆಯಿಂದಾಗಿ ಪ್ರತಿ ಮನೆ ಮನೆಗೂ ತಲುಪಿದೆ. ವಿಶೇಷವಾಗಿ ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಈ ಯೋಜನೆಗಳು ಆಧಾರ ಸ್ತಂಭವಾಗಿದೆ. ಇದು ಮತವಾಗಿ ಕಾಂಗ್ರೆಸ್ಗೆ ಅನುಕೂಲವಾಗಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರಣವಾಗುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ. ಕೇಂದ್ರ ಸರಕಾರದ ಬೆಲೆ ಏರಿಕೆ, ನಿರುದ್ಯೋಗ, ತೈಲ ಬೆಲೆ ಏರಿಕೆ ಈ ಚುನಾವಣೆಯಲ್ಲಿ ವಿಶೇಷ ಪ್ರಭಾವವನ್ನು ಬೀರುತ್ತದೆ. ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ. ಪದ್ಮರಾಜ್ ಆರ್ ಪೂಜಾರಿಯವರ ಸರಳ, ನಿಷ್ಕಳಂಕ ವ್ಯಕ್ತಿತ್ವ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಚಿಂತನೆ ಇದೆಲ್ಲವೂ ಅವರಿಗೆ ಪಕ್ಷಾತೀತವಾಗಿ ಅಭಿಮಾನಿ ವಲಯವನ್ನು ಸೃಷ್ಟಿಸಿದೆ. ಅವರು 50,000 ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ.