ಗುಣಾತ್ಮಕ ಮತ್ತು ಮೌಲ್ಯಯುತ ಶಿಕ್ಷಣಕ್ಕೆ ಹೆಸರುವಾಸಿ ನರೇಂದ್ರ ಪದವಿ ಪೂರ್ವ ಕಾಲೇಜು

0

ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ,ಗುಣಮಟ್ಟದ ಶಿಕ್ಷಣದ ಪ್ರಸರಣಕ್ಕಾಗಿ ಸುಮಾರು 70ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳನ್ನು ತೆರೆದಿದೆ.ಶಿಕ್ಷಣಕ್ಕೊಂದು ಹೊಸ ಭಾಷ್ಯವನ್ನು ನೀಡುವ ಹಿನ್ನೆಲೆಯಲ್ಲಿ ಈ ಎಲ್ಲಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ.ವಿವೇಕಾನಂದ ವಿದ್ಯಾವರ್ಧಕ ಸಂಘ ರೂಪಿಸಿದ ಅಂತಹ ಉತ್ಕೃಷ್ಟ ತಾಣಗಳಲ್ಲಿ ಪುತ್ತೂರಿನ ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜು ಕೂಡ ಒಂದು.


ಸ್ಥಳೀಯ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಪದವಿ ಪೂರ್ವ ಶಿಕ್ಷಣವನ್ನು ನೀಡುವ ಸದುದ್ದೇಶದಿಂದ 2017ರಲ್ಲಿ ತೆಂಕಿಲದ ವಿವೇಕ ನಗರದಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆ ,ಎಪ್ರಿಲ್ 6ರ 2019ರಂದು ಲೋಕಾರ್ಪಣೆಗೊಂಡು, ಎಲ್ಲಾ ಆಧುನಿಕ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ನೂತನ ಕಟ್ಟಡದಲ್ಲಿ ಶೈಕ್ಷಣಿಕ ತರಗತಿಗಳನ್ನು ನಡೆಸುತ್ತಿದೆ.ಪ್ರಶಾಂತ ಮತ್ತು ಕಲಿಕೆಗೆ ಪೂರಕ ವಾತಾವರಣದಲ್ಲಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಅನುಭವಿ ಶಿಕ್ಷಕರ ತಂಡ ಮಾತ್ರವಲ್ಲದೇ ಸುಸಜ್ಜಿತ ಗ್ರಂಥಾಲಯ ಮತ್ತು ಎಲ್ಲಾ ಉಪಕರಣಗಳನ್ನೊಳಗೊಂಡ ಪ್ರಯೋಗಾಲಯವನ್ನು ಹೊಂದಿದೆ.ಸಮರ್ಥ ಆಡಳಿತ ಮಂಡಳಿ ಎಲ್ಲಾ ಶೈಕ್ಷಣಿಕ ಕಾರ‍್ಯಕ್ರಮಗಳಿಗೆ ಅತ್ಯುತ್ತಮ ಮಾರ್ಗದರ್ಶನವನ್ನು ನೀಡುತ್ತಿದೆ.
ವಿವಿಧ ಸಾಮಾಜಿಕ ಸ್ತರದಿಂದ ಬರುವ ಪ್ರತಿಯೊಬ್ಬ ವಿದ್ಯಾರ್ಥಿಗೆ ಸಂಸ್ಕಾರ ನೀಡಿ,ಮಾನವೀಯ ಮೌಲ್ಯಗಳನ್ನು ಧಾರೆ ಎರೆದು ಸಾಂಘಿಕ ಬದುಕಿನ ಅರಿವು ಮೂಡಿಸಿ ಪ್ರಜ್ಞಾವಂತ ನಾಗರಿಕರನ್ನಾಗಿ ರೂಪಿಸುವ ಮಹತ್ವದ ಹೊಣೆಗಾರಿಕೆಯನ್ನು ಹೊತ್ತಿರುವ ಈ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯ ಆಂತರ್ಯದಲ್ಲಿ ಹುದುಗಿರುವ ಅನೇಕ ತೆರನಾದ ಪ್ರತಿಭೆಗಳಿಗೆ ವಿವಿಧರೂಪದಲ್ಲಿ ಅವಕಾಶವನ್ನು ನೀಡಲಾಗಿದೆ.


ವಿಜ್ಞಾನ ವಿಭಾಗದಲ್ಲಿ
ಪಿಸಿಎಂಬಿ/PCMB(ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ)
ಪಿಸಿಎಂಸಿ/PCMC (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಗಣಕವಿಜ್ಞಾನ)

ವಾಣಿಜ್ಯ ವಿಭಾಗದಲ್ಲಿ
ಎಸ್‌ಇಬಿಎ/SEBA(ಸಂಖ್ಯಾಶಾಸ್ತ್ರ, ಅರ್ಥಶಾಸ್ತ್ರ, ವ್ಯವಹಾರಅಧ್ಯಯನ, ಲೆಕ್ಕಶಾಸ್ತ್ರ)
ಬಿಇಬಿಎ/BEBA(ಮೂಲಗಣಿತ, ಅರ್ಥಶಾಸ್ತ್ರ, ವ್ಯವಹಾರಅಧ್ಯಯನ, ಲೆಕ್ಕಶಾಸ್ತ್ರ)

ಎಂಬ ಸಂಯೋಜನೆಗಳನ್ನು ಹೊಂದಿದೆ.ಇಂಗ್ಲಿಷ್ ಭಾಷೆ ಜೊತೆಗೆ ಇನ್ನುಳಿದಂತೆ ಕನ್ನಡ,ಹಿಂದಿ,ಸಂಸ್ಕೃತ ಭಾಷೆಯನ್ನು ಆರಿಸಿಕೊಳ್ಳಬಹುದಾಗಿದೆ.

ಅತ್ಯುತ್ತಮ ಫಲಿತಾಂಶ:
ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿಯನ್ನು ತಂದಿರುವಂತಹ ಎಲ್ಲಾ ವಿದ್ಯಾರ್ಥಿಗಳ ಸಾಧನೆ ಸ್ಮರಣೀಯ.2018-19ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಜಾಗೃತಿ ಜೆ. ನಾಯಕ್. ರಾಜ್ಯಕ್ಕೆ ಮೂರನೇ ರ‍್ಯಾಂಕ್ ,2019-20 ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ತನ್ಮಯಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್, 2020-21 ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ರೂಪಶ್ರೀ ಮತ್ತು ಎಸ್. ಕಾರ್ತಿಕ್ ನಾಯಕ್ ಇವರು 600ಕ್ಕೆ 600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ನ್ನು ಪಡೆದಿರುತ್ತಾರೆ.2021-22 ಶೈಕ್ಷಣಿಕ ಸಾಲಿನಲ್ಲಿ ಕು.ಮನ್ವಿತಾ ಎಸ್.ಇವರು ವಾಣಿಜ್ಯ ವಿಭಾಗದಲ್ಲಿ 593 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಮತ್ತು ತಾಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. 2022-23 ಶೈಕ್ಷಣಿಕ ಸಾಲಿನಲ್ಲಿ ಕು. ಪಲ್ಲವಿ .ಇವರು ವಾಣಿಜ್ಯ ವಿಭಾಗದಲ್ಲಿ 593 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಐದನೇ ರ‍್ಯಾಂಕ್ ಪಡೆದಿರುತ್ತಾರೆ. 2023 – 24 ಶೈಕ್ಷಣಿಕ ಸಾಲಿನಲ್ಲಿ ಕು. ಭೂಮಿಕಾ ಜಿ. ಇವರು ವಾಣಿಜ್ಯ ವಿಭಾಗದಲ್ಲಿ 589 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಒಂಭತ್ತನೇ ರ‍್ಯಾಂಕ್ ಪಡೆದಿರುತ್ತಾರೆ. ಪ್ರತೀ ವರ್ಷದ ಈ ಅತ್ಯುತ್ತಮ ಫಲಿತಾಂಶವು ಕಾಲೇಜಿನ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ.

ಕೋಚಿಂಗ್ ಮತ್ತು ಶುಲ್ಕ ವಿನಾಯಿತಿ:
ವಾರಾಂತ್ಯದಲ್ಲಿ ಜೆಇಇ ,ನೀಟ್,ಸಿಇಟಿ ತರಗತಿಗಳನ್ನು ನೀಡುವ ಮುಖಾಂತರ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಗಳನ್ನು ಮತ್ತು ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ಅಣಿಗೊಳಿಸಲಾಗುತ್ತಿದೆ.ಜೊತೆಗೆ ಎಸೆಸೆಲ್ಸಿಯಲ್ಲಿ ಶೇ.೯೮ಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಿದೆ. ಅಗತ್ಯವಿರುವ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ,ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಾಲೇಜಿನಲ್ಲಿ ನೀಡಲಾಗುತ್ತಿದೆ.

ಉಚಿತ ಸಿಎ ಫೌಂಡೇಶನ್ ಕೋರ್ಸ್
ಸಿಎ ವೃತ್ತಿಪರರಾಗಲು ಬಯಸುವ ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಸಿಎ,ಸಿಪಿಟಿ ತರಗತಿಗಳು ಅವರ ನಿಯಮಿತ ಶಿಕ್ಷಣದೊಂದಿಗೆ ಪ್ರಾರಂಭವಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ಅವರು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಕಷ್ಟು ಅವಕಾಶಗಳನ್ನು ಒದಗಿಸುತ್ತದೆ.

ಸಂಸ್ಕಾರಯುತ ಶಿಕ್ಷಣ ಮತ್ತು ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆಗೆ ಪೂರಕ ವ್ಯವಸ್ಥೆ :
ವಿದ್ಯಾರ್ಥಿಗಳಿಗಾಗಿ ಕರಾಟೆ ತರಬೇತಿ,ಸಾಫ್ಟ್‌ಸ್ಕಿಲ್ ,ಸ್ಪೋಕನ್‌ಇಂಗ್ಲಿಷ್ ತರಗತಿಗಳನ್ನು ನಡೆಸುವುದರ ಜೊತೆಗೆ ವಿದ್ಯಾರ್ಥಿ ಸಮುದಾಯದಲ್ಲಿ ಓರಣದ ನಡೆತೆ,ಸುಹವ್ಯಾಸ,ಸದಭಿರುಚಿಗಳ ಬೆಳವಣಿಗೆಗೆ ಮಾರ್ಗದರ್ಶನ ನೀಡಲಾಗುತ್ತಿದೆ.ವಿದ್ಯಾರ್ಥಿಗಳಿಗಾಗಿ ಸೂರ್ಯ ನಮಸ್ಕಾರ,ಪ್ರಾಣಾಯಾಮ,ವಿಷ್ಣು ಸಹಸ್ರನಾಮ ಪಠಣ,ಯೋಗ ,ಧ್ಯಾನ ತರಗತಿಯು ವಿದ್ಯಾರ್ಥಿಯ ನೆನಪಿನ ಶಕ್ತಿ ಹಾಗೂ ಓದಿನಲ್ಲಿ ಏಕಾಗ್ರತೆಯನ್ನು ಹೆಚ್ಚಿಸುವಂತೆ ಮಾಡಲು ಸಹಕಾರಿಯಾಗಿದೆ.

ವಿದ್ಯಾರ್ಥಿಗಳ ಸದೃಢ ಭವಿಷ್ಯದ ನಿರ್ಮಾಣಕ್ಕಾಗಿ Digital Class
ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿಯಾದ ಐಟಿ(Information Technology) ಮತ್ತು ಆಸಕ್ತ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ಗ್ರಾಫಿಕ್ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ನಡೆಸುತ್ತಿದ್ದು , ಉನ್ನತ ಶಿಕ್ಷಣಕ್ಕೆ ಅಗತ್ಯವಾದ ವಿಚಾರಗಳ , ಪರಿಕಲ್ಪನೆಗಳ ಬಗ್ಗೆ ಅರಿವು ಮೂಡಿಸಲಿರುವ ಒಂದು ವೇದಿಕೆಯಾಗಿದೆ.ಈ ತರಗತಿಗಳಲ್ಲಿ ಸ್ಪರ್ಧಾತ್ಮಕ ಜಗತ್ತಿಗೆ ತೆರೆದುಕೊಂಡಿರುವ ಶಿಕ್ಷಣ ವ್ಯವಸ್ಥೆಗೆ ಅಗತ್ಯವಾದ ತಂತ್ರಜ್ಞಾನಗಳ ವಿಚಾರಗಳ ಪ್ರಾಯೋಗಿಕ ಶಿಕ್ಷಣವನ್ನು ನೀಡಲಿರುವ ಪುತ್ತೂರಿನ ಏಕೈಕ ಶಿಕ್ಷಣ ಸಂಸ್ಥೆ ನರೇಂದ್ರ ಪ.ಪೂ. ಕಾಲೇಜು.

ಎಲ್ಲಾ ರೀತಿಯ ವೈಶಿಷ್ಟ್ಯತೆಗಳನ್ನು ಹೊಂದಿರುವ ಆಧುನಿಕ ಹಾಗೂ ಸಾಂಪ್ರದಾಯಿಕ ಶೈಕ್ಷಣಿಕ ಮೌಲ್ಯಗಳನ್ನು ಸಮರ್ಪಕ ಪ್ರಮಾಣದಲ್ಲಿ ಅನುಷ್ಠಾನಗೊಳಿಸುತ್ತಿದೆ ನರೇಂದ್ರ ಪ.ಪೂ. ಕಾಲೇಜು.ವ್ಯವಸ್ಥೆ ,ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟದಲ್ಲಿ ಈ ಸಂಸ್ಥೆಯು ಅತ್ಯಲ್ಪ ಅವಧಿಯಲ್ಲಿಯೇ ಪ್ರತಿಷ್ಠಿತ ಸಂಸ್ಥೆಗಳ ಸಾಲಿಗೆ ಸೇರ್ಪಡೆಗೊಂಡಿದೆ.


ದಾಖಲಾತಿ ಆರಂಭ :
ಈಗಾಗಲೇ ಪ್ರಥಮ ಪಿಯುಸಿಗೆ ದಾಖಲಾತಿ ಆರಂಭಗೊಂಡಿದ್ದು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್ ಸೈಟ್ www.narendrapu.vivekanandaedu.org ಅಥವಾ ಮೊಬೈಲ್ ಸಂಖ್ಯೆ 9481917888,08251-298555 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here