ಉಪ್ಪಿನಂಗಡಿ: ಮೇ.8ರಂದು ಅಂತರ್ ಕಾಲೇಜು ಪುರುಷರ ತ್ರೋಬಾಲ್ ಪಂದ್ಯಾಟ

0

ಉಪ್ಪಿನಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇವುಗಳ ಸಂಯುಕ್ತಾಶ್ರಯದಲ್ಲಿ ಮೇ.8 ರಂದು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ತ್ರೋಬಾಲ್ ಪಂದ್ಯಾಟವು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.


ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸುತ್ತಿರುವ ಪುರುಷರ ತ್ರೋಬಾಲ್ ಪಂದ್ಯಾಟಕ್ಕೆ ಈಗಾಗಲೇ ವಿಶ್ವವಿದ್ಯಾನಿಲಯ ವ್ಯಾಪ್ತಿಯ 24 ತಂಡಗಳು ನೋಂದಾವಣೆ ಮಾಡಿಕೊಂಡಿವೆ. ಪಂದ್ಯಾಟವನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟೀ ವಿವೇಕ್ ಆಳ್ವ ಉದ್ಯಾಟಿಸಲಿದ್ದು, ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಡಿಸೋಜ ಅತಿಥಿಗಳಾಗಿ ಭಾಗವಹಿಸಲಿದ್ದು, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರವಿರಾಜ ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ ಹಾಗೂ ಮೋನಪ್ಪ ರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here