ಮಂಗಳೂರಿನ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿನ ರೂ.80 ಲಕ್ಷ ವಿದ್ಯಾರ್ಥಿ ವೇತನ ಘೋಷಣೆ

0

ವಿಟ್ಲ: ಮಂಗಳೂರಿನ ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಗೊಳಪಟ್ಟ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ.ಪೂ. ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆಯುವ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸುಮಾರು ರೂ 80 ಲಕ್ಷದ ವಿದ್ಯಾರ್ಥಿವೇತನವನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.ಸಿ ನಾಯ್ಕ್ ರವರು ಘೋಷಣೆ ಮಾಡಿದ್ದಾರೆ. ಇದರಲ್ಲಿ 10 ಲಕ್ಷ ರೂ. ವಿದ್ಯಾರ್ಥಿ ವೇತನವನ್ನು ಮುಂಬಯಿಯ ಉದ್ಯಮಿ ಡಾ. ಶಶಿಕಿರಣ ಶೆಟ್ಟಿಯವರು ನೀಡುತ್ತಿದ್ದಾರೆ.

ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 5 ರಿಂದ 10ನೇ ತರಗತಿಯವರೆಗಿನ 6 ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗುತ್ತದೆ. ಇವರಿಗೆ ಡಾ. ಶಶಿಕಿರಣ ಶೆಟ್ಟಿಯವರಿಂದ ರೂ. 50,೦೦೦ದಂತೆ 3ಲಕ್ಷ ರೂಪಾಯಿ ಹಾಗೂ ಉಳಿದಿರುವ ಇವರ ಶುಲ್ಕದ ಹಣವನ್ನು ಡಾ. ಕೆ.ಸಿ. ನಾಯ್ಕ್ ರವರು ವಿದ್ಯಾರ್ಥಿ ವೇತನದ ಮೂಲಕ ಭರಿಸುತ್ತಾರೆ.
ಶಕ್ತಿ ಪ.ಪೂ. ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಉದ್ದೇಶಿಸಿರುವ ವಿಜ್ಞಾನ ವಿಭಾಗದ ಬಡ ಪ್ರತಿಭಾನ್ವಿತ 7 ವಿದ್ಯಾರ್ಥಿಗಳಿಗೆ ತಲಾ 1ಲಕ್ಷ ರೂಪಾಯಿಗಳ ಹಾಗೆ ಒಟ್ಟು 7 ಲಕ್ಷ ವಿದ್ಯಾರ್ಥಿ ವೇತನವನ್ನು ಡಾ. ಶಶಿಕಿರಣ ಶೆಟ್ಟಿ ಹಾಗೂ ಶಕ್ತಿ ವಿದ್ಯಾ ಸಂಸ್ಥೆಯಿಂದ ಇವರ ಉಳಿದ ಶುಲ್ಕದ ಹಣವನ್ನು ವಿದ್ಯಾರ್ಥಿ ವೇತನದ ಮೂಲಕ ಭರಿಸಲಾಗುತ್ತದೆ. ಈ ಎರಡು ವಿದ್ಯಾರ್ಥಿ ವೇತನವನ್ನು ಪಡೆಯುವ ವಿದ್ಯಾರ್ಥಿಗಳ ಪೋಷಕರು 3 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ವರಮಾನವನ್ನು ಹೊಂದಿದ್ದರೆ ಇಂತಹ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಇವರು ಸಂಸ್ಥೆಯು ನಿಗದಿ ಪಡಿಸಿರುವ ಮಾನದಂಡಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಶಕ್ತಿ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗದಲ್ಲಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ 99% ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದರೆ ಪ್ರಥಮ ಪಿಯುಸಿಗೆ ಸಂಪೂರ್ಣ ಉಚಿತ ಶಿಕ್ಷಣವನ್ನು ಕೊಡಲು ಸಂಸ್ಥೆಯು ತೀರ್ಮಾನಿಸಿರುತ್ತದೆ. ಇದರ ಸದುಪಯೋಗವನ್ನು ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಬೋರ್ಡ್, ಐಸಿಎಸ್‌ಇ ಮತ್ತು ಸಿಬಿಎಸ್‌ಇ ನಡೆಸುವ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ 95% ಕ್ಕಿಂತ ಹೆಚ್ಚು ಅಂಕ ಪಡೆಯುವ 50 ವಿದ್ಯಾರ್ಥಿಗಳು ಶಕ್ತಿ ಪಪೂ ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಪ್ರವೇಶ ಪಡೆದರೆ ಅವರ ಭೋದನಾ ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿಯನ್ನು ನೀಡಲಾಗುತ್ತದೆ. ಈ ಎಲ್ಲಾ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶಕ್ತಿನಗರದಲ್ಲಿರುವ ಶಕ್ತಿ ಸಂಸ್ಥೆಯ ಕಛೇರಿ ಅಥವಾ ಮೊಬೈಲ್ ಸಂಖ್ಯೆ 9686000046ಯನ್ನು ಸಂಪರ್ಕಿಸಬಹುದೆಂದು ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here