ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ

0

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಮೇ.7ರಂದು ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ ಸೀತಾರಾಮ ರೈ ಸವಣೂರು ಇವರು ವಿದ್ಯಾಸಂಸ್ಥೆಗಳು ಪ್ರತಿಯೊಬ್ಬ ವಿದ್ಯಾರ್ಥಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಹೊರತರುವಂತಹ ಕೆಲಸವನ್ನು ಮಾಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಒಬ್ಬ ವ್ಯಕ್ತಿಯನ್ನು ಆದರ್ಶವಾಗಿ ಇಟ್ಟುಕೊಂಡು ತಮ್ಮ ಸಾಧನೆಯನ್ನು ಮಾಡಬೇಕು. ಹಾಗೆಯೇ ಮತ್ತೊಬ್ಬರಲ್ಲಿರುವ ಒಳ್ಳೆಯತನವನ್ನು ಅನುಸರಿಸಿ ಕಲಿಯಬೇಕು ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿದ್ದ ಡಾ.ಹೆಚ್ ಜಿ ಶ್ರೀಧರ್ ನಿವೃತ್ತ ಕನ್ನಡ ಉಪನ್ಯಾಸಕರು ವಿವೇಕಾನಂದ ಪ್ರಥಮ ದರ್ಜೆ ಕಾಲೇಜು ಪುತ್ತೂರು ಇವರು ನಮ್ಮ ಮುಂದಿರುವ ಜಗತ್ತು ತುಂಬಾ ಆಕರ್ಷಮಯವಾದದ್ದು ಹಾಗಾಗಿ ನಾವು ನಮ್ಮ ಮನಸ್ಸಿಗೆ ಒಂದು ಚೌಕಟನ್ನು ಹಾಕಿ ಬದುಕನ್ನು ಕಟ್ಟಿಕೊಳ್ಳಬೇಕು. ಜಗತ್ತು ಬಯಸುವ ಹಾಗೆ ನಾವು ಬದುಕನ್ನು ನಡೆಸಬೇಕು ಎಂದರು. ಕಾರ್ಯಕ್ರಮದ ಅತಿಥಿಯಾಗಿದ್ದ ವಿಎಂವೇರ್ ಲೀಡ್ ಡಾಟಬೇಸ್ ಆಡಳಿತಾಧಿಕಾರಿ ಮನೋಜ್ ರೈ ಮಾತನಾಡಿ, ನಾವು ನಮ್ಮ ಗುರಿಯನ್ನು ತಲುಪಲು ಮಾಡುವ ಪ್ರಯತ್ನ ತಪಸ್ಸಿನಂತಿರಬೇಕು. ಜೀವನದಲ್ಲಿ ಸತ್ಯಧರ್ಮದಲ್ಲಿ ನಾವು ಬಾಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ ಇವರು ವಿದ್ಯಾರ್ಥಿ ಜೀವನದಲ್ಲಿ ಹುಟ್ಟಿಕೊಳ್ಳವಂತ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ಕಂಡುಕೊಂಡು ಗುರುಹಿರಿಯರು ಹೇಳಿರುವಂಥಹ ಮಾತುಗಳನ್ನು ಆಲಿಸಿ ತಮ್ಮಲ್ಲಿ ಮೈಗೂಡಿಸಿಕೊಳ್ಳುವಂತಹ ಮನೋಭಾವ ನಮ್ಮಲ್ಲಿರಬೇಕು ಎಂದರು. ಈ ಸಂದರ್ಭದಲ್ಲಿ ವರದಿ ವಾಚನವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಕೆ ನಾರಾಯಣ ಮೂರ್ತಿಯವರು ಮಾಡಿದರು.
ವೇದಿಕೆಯಲ್ಲಿ ಸಂಸ್ಥೆಯ ಉಪಪ್ರಾಂಶುಪಾಲ ಶೇಷಗಿರಿ ಎಂ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪುಷ್ಪಾವತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರನ್ನೂ ತೃತೀಯ ಬಿಕಾಂ ವಿದ್ಯಾರ್ಥಿಯಾದ ಸಾಧಿಕ್ ಸ್ವಾಗತಿಸಿ, ಸ್ವಸ್ತಿ ವಂದಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ತೃತೀಯ ಬಿ,ಎ ವಿದ್ಯಾರ್ಥಿ ಶಮೀರ್ ನಿರ್ವಹಿಸಿದರು. ಕಾರ್ಯಕ್ರಮವು ವಿದ್ಯಾರ್ಥಿನಿಯರಾದ ಶ್ರಾವ್ಯವಾಣಿ ಹಾಗೂ ಅಭಿಜ್ಞ ರವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.

LEAVE A REPLY

Please enter your comment!
Please enter your name here