ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ತಲುಪಲಿದ್ದು ಬಳಿಕ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here