ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿಯ ನೇತೃತ್ವದಲ್ಲಿ ನಡೆಯುವ ಉಚಿತ ವೈದ್ಯಕೀಯ ಶಿಬಿರ 26ನೇ ಶಿಬಿರವು ಮೇ.5ರಂದು ದೇವಸ್ಥಾನದಲ್ಲಿ ನಡೆಯಿತು.
ಶಿಬಿರವನ್ನು ಚಂದ್ರಾವತಿ ಉಗ್ಗಪ್ಪ ಗೌಡ ಸಂಪ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಟಕಪೂರ್ವ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು.ನವಚೇತನ ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಉದಯಗಿರಿ, ಮುಕ್ರಂಪಾಡಿ ಶ್ರೀಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಸೋಮಶೇಖರ ರೈ ಇಳಂತಾಜೆ, ಮೊಟ್ಟೆತ್ತಡ್ಕ ಐಕ್ಯಕಲಾ ಸೇವಾ ಟ್ರಸ್ಟ್ನ ಅವಿನಾಶ್ ಮೊಟ್ಟೆತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಯಲಕ್ಷ್ಮೀ ಶಗ್ರಿತ್ತಾಯ ಪ್ರಾರ್ಥಿಸಿದರು. ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಸ್ವಾಗತಿಸಿದರು. ಉದಯ ಕುಮಾರ್ ರೈ ಎಸ್ ಸಂಪ್ಯ ಕಾರ್ಯಕ್ರಮ ನಿರೂಪಿಸಿ, ಉಮೇಶ್ ಎಸ್.ಕೆ ವಂದಿಸಿದರು. ಶಿಬಿರದಲ್ಲಿ ತಜ್ಞರಿಂದ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ ಹಾಗೂ ಉಚಿತ ಔಷಧಿಗಳ ವಿತರಿಸಲಾಯಿತು. ನೂರಾರು ಮಂದಿ ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.
ಸಂಪ್ಯ ನವಚೇತನ ಯುವಕ ಮಂಡಲ, ಮೊಟ್ಟೆತ್ತಡ್ಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಮೊಟ್ಟೆತ್ತಡ್ಕ ಐಕ್ಯ ಕಲಾ-ಸೇವಾ ಟ್ರಸ್ಟ್, ಐಡಿಯಲ್ ಲ್ಯಾಬೊರೇಟರಿ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು, ಉಷಾ ಸ್ಕ್ಯಾನ್ ಸೆಂಟರ್ ದರ್ಬೆ, ಪುತ್ತೂರು ಡಯಾಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ತೆಂಕಿಲ ಹಾಗೂ ಹಲವು ಔಷಧಿ ಕಂಪೆನಿಗಳು ಶಿಬಿರದಲ್ಲಿ ಸಹಕರಿಸಿದ್ದರು.