ಆಲಂಕಾರು ಶ್ರೀ ದುರ್ಗಾಂಬಾ ಪ್ರೌಢ ಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ 100% ಫಲಿತಾಂಶ

0

ಆಲಂಕಾರು: ಶ್ರೀ ದುರ್ಗಾಂಬಾ ಪ್ರೌಢ ಶಾಲೆ ಆಲಂಕಾರು ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಬಂದಿದೆ. ಒಟ್ಟು 33 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ ಕೀರ್ತಿ – 561, ಬಿ. ಲಕ್ಷ್ಯ – 542, ಸಂದ್ಯಾ – 534, ಕಾವ್ಯ – 532, ಜ್ಯೋತ್ಸ್ನ – 529ಅಂಕ ಪಡೆದು ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಹಾಗೂ 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 07 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ .

ಉತ್ತಮ ಫಲಿತಾಂಶ ದಾಖಲಿಸುವಲ್ಲಿ ಮಾರ್ಗದರ್ಶನ ನೀಡಿದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ದಯಾನಂದ ರೈ ಮನವಳಿಕೆ, ಕಾರ್ಯದರ್ಶಿಗಳಾದ ಈಶ್ವರ ಗೌಡ ಪಜ್ಜಡ್ಕ, ಆಡಳಿತ ಮಂಡಳಿಯ ಎಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು, ಆಡಳಿತಾಧಿಕಾರಿಗಳು,ಮತ್ತು ಪ್ರಾಂಶುಪಾಲರಿಗೆ ಹಾಗೂ ಉತ್ತಮ ಫಲಿತಾಂಶ ಪಡೆಯಲು ಶ್ರಮಿಸಿದ ಅಧ್ಯಾಪಕ ವೃಂದದವರಿಗೆ, ಹಾಗೂ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ವೃಂದದವರಿಗೆ ಮುಖ್ಯ ಗುರುಗಳಾದ ನವೀನ್ ರೈ ಅವರು ಧನ್ಯವಾದ ಸಮರ್ಪಿಸಿದರು. ಹಾಗೂ ಉತ್ತಮ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here