ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ : ಬುರೂಜ್ ಹೈಸ್ಕೂಲ್ ಗೆ 100 ಶೇಕಡಾ

0

ಪುಂಜಾಲಕಟ್ಟೆ: ಬುರೂಜ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ರಝಾನಗರ ಕಲಾಬಾಗಿಲು ಬಂಟ್ವಾಳ ಇಲ್ಲಿಯ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಶಾಲೆಯ 34 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರು ಉತ್ತೀರ್ಣರಾಗಿದ್ದಾರೆ.

ಬೇಂಗತ್ತೋಡಿಯ ಇಶ್ರತ್ ಬಾನು 96.96% ಪಡೆದಿದ್ದು ಶಾಲೆಗೆ ಟಾಪರ್ ಆಗಿ ಆಯ್ಕೆಯಾಗಿರುತ್ತಾಳೆ. ಅನನ್ಯ ಅಡಪ 94.40%, ಮತ್ತು ವಿಶ್ರಾಂತ್ ಕುಲಾಲ್ 90.80% ಪಡೆದು ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
3ಮಂದಿ ಉತ್ಕೃಷ್ಟ ಶ್ರೇಣಿಯಲ್ಲಿ,7 ಮಕ್ಕಳು ಅತ್ಯುತ್ತಮ ಶ್ರೇಣಿಯಲ್ಲಿ,20 ಮಕ್ಕಳು ಪ್ರಥಮ ಶ್ರೇಣಿಯಲ್ಲಿ 3 ಮಕ್ಕಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here