ಎಸ್‌ಎಸ್‌ಎಲ್‌ಸಿ: ಹಿರೆಬಂಡಾಡಿ ಸರಕಾರಿ ಪ್ರೌಢಶಾಲೆಗೆ ಸತತ 4ನೇ ಬಾರಿ ಶೇ.100 ಫಲಿತಾಂಶ

0

ಹಿರೆಬಂಡಾಡಿ: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಹಿರೆಬಂಡಾಡಿ ಸರಕಾರಿ ಪ್ರೌಢಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆ ಸತತ ನಾಲ್ಕನೇ ಬಾರಿಯೂ ಶೇ.100 ಫಲಿತಾಂಶ ದಾಖಲಿಸಿದೆ.

ಸಂಸ್ಥೆಯಿಂದ ಒಟ್ಟು 49 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ 6 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 17 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಒಂದು ವಿದ್ಯಾರ್ಥಿನಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಿಯಾಂಕ 564, ಸಿಂಚನಾ ಎನ್ 554, ನಿತನ್ ಕುಮಾರ್ 548, ಬಿ.ಸಮಿಳಾ 543, ಮನೀಶ್ ಎಂ 543, ಪ್ರಜ್ವಲ್ 533 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here