ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್ ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ

0

ವಿಟ್ಲ: ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ‌ ವಾರ್ಷಿಕ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ100 ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವೃದ್ಧಿ ಎ. ಕೊಂಡೆ ಅತಿ ಹೆಚ್ಚು ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಅವರು ಸೂರಿಕುಮೇರು ನಿವಾಸಿ ಅಶೋಕ್ ಬಿ. ಕೊಂಡೆ ಮತ್ತು ಮಧುರ ದಂಪತಿಗಳ ಪುತ್ರಿ.


ದ್ವಿತೀಯ ಸ್ಥಾನಿಯಾಗಿರುವ ಮಾನ್ಯ ಆರ್ ಶೆಟ್ಟಿ ರವರು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆ ಮತ್ತು‌‌ ಹರಿಣಿ ದಂಪತಿಗಳ ಪುತ್ರಿ. ತೃತೀಯ ಸ್ಥಾನವನ್ನು ಪಡೆದುಕೊಂಡಿರುವ ಪ್ರೇಕ್ಷಾರವರು ಮಾಣಿ ನಿವಾಸಿ ಕೆ. ಆನಂದ ಕುಲಾಲ್ ಮತ್ತು‌ ಸುಶೀಲ ಎ ದಂಪತಿಗಳ‌ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here