ಎಸ್‌ಎಸ್‌ಎಲ್‌ಸಿ: ಕೊಣಾಲು ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ನೆಲ್ಯಾಡಿ: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಕೊಣಾಲು ಸರಕಾರಿ ಪ್ರೌಢಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಗುಣಾತ್ಮಕ ಫಲಿತಾಂಶದಲ್ಲಿ ಶೇ.82ರೊಂದಿಗೆ ಎ ಗ್ರೇಡ್ ಪಡೆದುಕೊಂಡಿದೆ.

ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ ಎಲ್ಲಾ 35 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. 3 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ. 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 9 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಆಯಿಷತ್ ಹರ್ಝ 561, ಮುಬೀನಾ 530, ಗೌಶಿಯಾಬಾನು 519 ಅಂಕ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here