ಎಸ್‌ಎಸ್‌ಎಲ್‌ಸಿ: ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ನೆಲ್ಯಾಡಿ: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.
ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 54 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 2 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಅಝ್ವಿನತ್ ಮುಫಿದ 587, ಮೋಕ್ಷಿತ್ ಎಸ್.584, ಪುಣ್ಯಶ್ರೀ 573, ರಕ್ಷಿತ್ 569, ಅರ್ಚನಾ ವಿ 569, ನಿತೇಶ್ ಎಸ್.ಗೌಡ 543 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here