ಪಾಪೆಮಜಲು ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ-8 ಡಿಸ್ಟಿಂಕ್ಷನ್, 26 ಪ್ರಥಮ ಶ್ರೇಣಿ, 5 ದ್ವಿತೀಯ ಶ್ರೇಣಿ

0

ಪುತ್ತೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 42 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದು 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಒಬ್ಬರು ವಿದ್ಯಾರ್ಥಿ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿ ಭವ್ಯಶ್ರೀ 603 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಉಳಿದಂತೆ ಮೋಕ್ಷ 580, ನಯನಶ್ರೀ 580, ರಮ್ಯ 564, ಚೈತ್ರಾಶ್ರೀ 556, ಫಾತಿಮತ್ ಇರ್ಷಾನ 546, ನಿಶಾಂತ್ ಪಿ. 541 ಹಾಗೂ ಪ್ರಣೀತಾ 573 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here