ಎಸ್ ಎಸ್ ಎಲ್ ಸಿ ಪರೀಕ್ಷೆ – ಪಾಪೆಮಜಲು ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ಪುತ್ತೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಪಾಪೆಮಜಲು ಇಲ್ಲಿ ಪರೀಕ್ಷೆ ಬರೆದ 42 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಗೆ ಶೇ.100 ಫಲಿತಾಂಶ ಬಂದಿದೆ.

ಭವ್ಯಶ್ರೀ 603 ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮತ್ತು ಶಿಕ್ಷಣ ತಜ್ಞ ದಶರಥ್ ರೈ ವಿದ್ಯಾರ್ಥಿನಿ ಮನೆಗೆ ತೆರಳಿ ಶಾಲು ಹೊದಿಸಿ ಉಡುಗೊರೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪೋಷಕರು ಮತ್ತು ಶಾಲಾ ಎಸ್ ಡಿ ಎಂ ಸಿ ಸದಸ್ಯ ಹೊನ್ನಪ್ಪ ನಾಯ್ಕ್ ಉಪಸ್ಥಿತರಿದ್ದರು. ಭವ್ಯಶ್ರೀ ಉತ್ತಮ ವಾಗ್ಮಿ ಮತ್ತು ವಾಲಿಬಾಲ್ ಕ್ರೀಡಾಪಟುವಾಗಿದ್ದು, ಗೈಡ್ಸ್ ರಾಜ್ಯ ಪುರಸ್ಕಾರ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಾಳೆ.

LEAVE A REPLY

Please enter your comment!
Please enter your name here