ಎಸ್‌ಎಸ್‌ಎಲ್‌ಸಿ: ವಳಾಲು ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ನೆಲ್ಯಾಡಿ: 2023-24ನೇ ಸಾಲಿನ ಎಸ್‌ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಜತ್ತೂರು ವಳಾಲು ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.
ಶಾಲೆಯಿಂದ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ನಾಲ್ವರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಚರಣ್ 570, ಲಿಖಿತ್ 545, ಅಕ್ಷತಾ 541, ಕಾವ್ಯಶ್ರೀ 539 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ ಎಂದು ಶಾಲಾ ಮುಖೋಪಾಧ್ಯಾಯರಾದ ಚಕ್ರಪಾಣಿ ಎ.ವಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here