ಮಂಗಳೂರು ವಿವಿ ಅಂತರ್ ಕಾಲೇಜು ಪುರುಷರ ತ್ರೋಬಾಲ್-ಹೆಬ್ರಿ ತಂಡ ಚಾಂಪಿಯನ್, ಉಪ್ಪಿನಂಗಡಿ ತಂಡ ರನ್ನರ್ ಅಫ್

0

ಉಪ್ಪಿನಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಹೆಬ್ರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಅತಿಥೇಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡ ರನ್ನರ್‌ಅಪ್ ಆಗಿ ಮೂಡಿಬಂದಿದೆ.


ಇದೇ ಮೊದಲ ಬಾರಿಗೆ ಆಯೋಜಿಸಿದ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಸುಮಾರು 18 ತಂಡಗಳು ಭಾಗವಹಿಸಿದ್ದವು. ಸೆಮಿ ಫೈನಲ್ಸ್ ಪಂದ್ಯಾಟದಲ್ಲಿ ವಿಜೇತ ಹೆಬ್ರಿ ಕಾಲೇಜು ತಂಡವು, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಹಾಗೂ ಅತಿಥೇಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜು ತಂಡವು ಕಾರ್ಕಳ ಪ್ರಥಮ ದರ್ಜೆ ಕಾಲೇಜು ತಂಡಗಳನ್ನು ಸೋಲಿಸಿ ಅಂತಿಮ ಸುತ್ತಿಗೆ ಪ್ರವೇಶ ಪಡೆದಿತ್ತು. ಫೈನಲ್ಸ್ ನಲ್ಲಿ ಹೆಬ್ರಿ ತಂಡವು ಉಪ್ಪಿನಂಗಡಿ ತಂಡವನ್ನು 25-15 ಹಾಗೂ 25-20 ನೇರ ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆದುಕೊಂಡಿತು. ಹೆಬ್ರಿಯ ಗುರುರಾಜ್ ಟೂರ್ನಿಯ ಉತ್ತಮ ಆಟಗಾರ ಪ್ರಶಸ್ತಿ ಪಡೆದುಕೊಂಡರು.


ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾದ ಪ್ರೇಮನಾಥ ಶೆಟ್ಟಿ, ಮೋನಪ್ಪ ಎಂ., ಉದಯಕುಮಾರ್ ಪ್ರಶಸ್ತಿ ವಿತರಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ರವಿರಾಜ್ ಎಸ್. ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ್ ಕುಡಮರ, ದೈಹಿಕ ಶಿಕ್ಷಣ ಶಿಕ್ಷಕ ವಿಜೇತ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here