ಮೈಸೂರು ಜೆಎಸ್‌ಎಸ್ ಆಸ್ಪತ್ರೆಯ ಡಾ.ಶ್ಯಾಮ್ ಪ್ರಸಾದ್ ಶೆಟ್ಟಿ ಅವರಿಗೆ “ಕಾಯಕ ಶ್ರೇಷ್ಠ” ಪುರಸ್ಕಾರ

0

ಪುತ್ತೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ಚಾಮರಾಜನಗರ ಜಿಲ್ಲಾ ಘಟಕಗಳ ಸಹಯೋಗದಲ್ಲಿ ಬಸವ ಜಯಂತಿ ಅಂಗವಾಗಿ ನೀಡುವ “ಕಾಯಕ ಶ್ರೇಷ್ಠ” ಪುರಸ್ಕಾರಕ್ಕೆ ಮೈಸೂರು ಜೆಎಸ್‌ಎಸ್ ಆಸ್ಪತ್ರೆಯ ಹೃದಯ ಶಸ್ತ್ರಚಿಕಿತ್ಸಕ ಡಾ.ಶ್ಯಾಮ್ ಪ್ರಸಾದ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮೇ.9ರಂದು ಮೈಸೂರಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ವೃತ್ತಿಯಲ್ಲಿ ಪ್ರಾಮಾಣಿಕತೆ, ಕಾಯಕದಲ್ಲಿ ಇವರ ನಿಷ್ಠೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಮತಕುಮಾರ್, ಜಿಲ್ಲಾಧ್ಯಕ್ಷ ಪಿ. ಸೋಮಶೇಖರ್, ರೈತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬರಡನಪುರ ನಾಗರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮೂಲತಃ ಬೆಳ್ಳಿಪ್ಪಾಡಿ ಮನೆತನದವರಾದ ಡಾ.ಶ್ಯಾಮ್ ಪ್ರಸಾದ್ ಶೆಟ್ಟಿರವರು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯ ಹೃದಯ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರು ಹಾಗೂ ಜೆಎಸ್‌ಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಉಪನಿರ್ದೇಶಕರಾಗಿದ್ದಾರೆ.

LEAVE A REPLY

Please enter your comment!
Please enter your name here