ಸರಕಾರಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ

0

ಪುತ್ತೂರು:2023-24ನೇ ಸಾಲಿನ ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ ಪುತ್ತೂರಿನ ಸರ್ಕಾರಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.
ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 36 ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಖದೀಜತ್ ನಿಧಾ(563), ಫಾತಿಮತ್ ಸಾಲಿಮ(561), ಸ್ವಾಲಿಹಾ ಶಬ್ ನಮ್(545), ಶಹ್ ಮಾ ಫಾತಿಮಾ(536) ಅಂಕ ಪಡೆದುಕೊಂಡು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಅವಿನಾಶ್ ಟಿ ಸಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here