ನೆಲ್ಯಾಡಿ: ಕುಡಿದ ಮತ್ತಿನಲ್ಲಿ ಹೊಡೆದ ಏಟಿನಿಂದ ವ್ಯಕ್ತಿಯೋರ್ವರು ಪ್ರಾಣ ಕಳೆದುಕೊಂಡಿರುವ ಘಟನೆ ಕೊಕ್ಕಡದಲ್ಲಿ ಮೇ 13ರಂದು ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಪೈಕ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟವರು.ಅನಾರೋಗ್ಯದ ಹಿನ್ನೆಲೆಯಲ್ಲಿ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ಡಿಸ್ಚಾರ್ಜ್ ಆಗಿ ಕೊಕ್ಕಡಕ್ಕೆ ಬಸ್ಸಿನಲ್ಲಿ ಬಂದಿದ್ದ ಕೃಷ್ಣ ಅವರು ಕೊಕ್ಕಡದಲ್ಲಿ ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದಂತೆ ಡಾ.ಕುಮಾರ್ ಎಂಬವರು ಏಕಾಏಕಿ ಕೃಷ್ಣ ಅವರ ಕೆನ್ನೆಗೆ ಬಲವಾಗಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಮೊದಲೇ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಏಟಿನ ಹೊಡೆತಕ್ಕೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.ಹಲ್ಲೆ ಮಾಡಿರುವವರು ಪಶುವೈದ್ಯರಾಗಿದ್ದು ಕುಡಿತದ ಮತ್ತಿನಲ್ಲಿ ಅವರು ಈ ಕೃತ್ಯ ಎಸಗಿದ್ದಾರೆ ಎಂದು ವರದಿಯಾಗಿದೆ.ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.