ಉಪ್ಪಿನಂಗಡಿ:ಅಪ್ರಾಪ್ತನಿಗೆ ಲೈಂಗಿಕ ಕಿರುಕುಳ-ಪೋಕ್ಸೋ ಪ್ರಕರಣ ದಾಖಲು: ಆರೋಪಿಯ ಬಂಧನ

0

ಉಪ್ಪಿನಂಗಡಿ: ಅಪ್ರಾಪ್ತ ವಯಸ್ಕ ಬಾಲಕನಿಗೆ ಅನ್ಯಕೋಮಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಲ್ಪಟ್ಟ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.


ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದೋರ್ಮೆ ಎಂಬಲ್ಲಿನ ಅಬ್ದುಲ್ಲಾ ಬಿಳಿಯೂರು (36) ಪ್ರಕರಣದ ಆರೋಪಿ. ಎರಡು ಮಕ್ಕಳ ತಂದೆಯಾಗಿರುವ ಈತ 13 ವರ್ಷದ ಬಾಲಕನನ್ನು ಮನೆಯಲ್ಲಿ ಕೆಲಸವಿದೆ ಎಂದು ಕರೆಯಿಸಿ, ಹಾಗೂ ಸ್ಕೂಟಿ ಸವಾರಿ ಹೇಳಿ ಕೊಡುತ್ತೇನೆಂದು ಕರೆಯಿಸಿ ವಿವಿಧ ದಿನಗಳಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ನೊಂದ ಬಾಲಕ ಶಾಲೆಯಲ್ಲಿ ನೀಡಿದ ಮಾಹಿತಿಯಂತೆ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದ. ಅವರ ಸಲಹೆಯಂತೆ ತನ್ನ ತಾಯಿಯೊಂದಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ಸಲ್ಲಿಸಿರುತ್ತಾನೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here