ಮೇ 17: ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘ, ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವ

0

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವವು ಮೇ.17 ರಂದು ಸಂಜೆ ಕಾಲೇಜಿನ ಬೆಳ್ಳಿ ಹಬ್ಬದ ಸಭಾಂಗಣದಲ್ಲಿ ಜರಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್ ರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ವಿದ್ಯಾರ್ಥಿ ಹಾಗೂ ಜಿ.ಎಲ್ ಸಮೂಹ ಸಂಸ್ಥೆಗಳ ಚೇರ್ ಮ್ಯಾನ್ ಬಲರಾಂ ಆಚಾರ್ಯ, ದರ್ಬೆ ಅಶ್ವಿನಿ ಹೋಟೆಲ್ ಮಾಲಕ ಕರುಣಾಕರ್ ರೈ ದೇರ್ಲ, ಗೌರವ ಅತಿಥಿಗಳಾಗಿ ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ|ಡಾ.ಆಂಟನಿ ಪ್ರಕಾಶ್ ಮೊಂತೇರೊ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೊರವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸಹಾಯಕ ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ವರ್ಗ, ವಿದ್ಯಾರ್ಥಿ ಸಾಧಕರನ್ನು ಗೌರವಿಸಲಾಗುವುದು. ಕಾಲೇಜಿನ ಪ್ರಥಮ ಬ್ಯಾಚ್ ಹಿರಿಯ ವಿದ್ಯಾರ್ಥಿ ನಿವೃತ್ತ ಡಿ.ವೈ.ಎಸ್.ಪಿ ಎನ್ ಜಗನ್ನಾಥ್ ರೈಯವರಿಗೆ ಸನ್ಮಾನ, ನಿವೃತ್ತ ಪ್ರಾಂಶುಪಾಲ ವಂ|ಹೆನ್ರಿ ಕ್ಯಾಸ್ಟಲಿನೋ ಧತ್ತಿನಿಧಿ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು. ಹಿರಿಯ ವಿದ್ಯಾರ್ಥಿಗಳು ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿರಬೇಕು ಎಂದು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ.ಜಗಜ್ಜೀವನ್ ದಾಸ್ ರೈ, ಕಾರ್ಯದರ್ಶಿ ತೇಜಸ್ವಿ ಭಟ್ ಕೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯತೀಂದ್ರನಾಥ್ ಪಿ.ಡಿ, ಕಾರ್ಯದರ್ಶಿ ಪ್ರಶಾಂತ್ ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ವಾರ್ಷಿಕೋತ್ಸವ ಕಾರ್ಯಕ್ರಮದ ಮೊದಲು(ಸಂಜೆ 4 ಗಂಟೆಗೆ) ಕಾಲೇಜಿನ ಸಿಲ್ವರ್ ಜ್ಯುಬಿಲಿ ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ನಡೆಯಲಿರುವುದು.
*ಸಾಂಸ್ಕೃತಿಕ ನೀಡಲು ಬಯಸುವ ಹಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ತೇಜಸ್ವಿ ಭಟ್(ಮೊ:8197807074) ನಂಬರಿಗೆ ಸಂಪರ್ಕಿಸುವುದು.

LEAVE A REPLY

Please enter your comment!
Please enter your name here