ಕುಂತೂರು: ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ “ಎಮೋಷನ್ ಇಂಟೆಲಿಜೆನ್ಸ್ ಆಸ್ ಎ ಟೂಲ್ ಆ ಟೀಚಿಂಗ್ ದಿ ಮೈಂಡ್” ಎಂಬ ವಿಷಯದ ಕುರಿತು ಪ್ರೇರಣಾ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಸೇವಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನಂದೀಶ ವೈ.ಡಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಜೀವನದಲ್ಲಿ ಭಾವನಾತ್ಮಕ ಆಪ್ತತೆ ಹಾಗೂ ಅನ್ಯೋನ್ಯತೆಯ ಸಂವಹನದ ಮೂಲಕ ಮಾನಸಿಕವಾಗಿ ಆತ್ಮಸ್ಥೈರ್ಯವನ್ನು ಬೆಳೆಸುವಲ್ಲಿ ಶಿಕ್ಷಕ ಹಾಗೂ ಪೋಷಕರ ಪಾತ್ರ ಅತ್ಯಂತ ಮಹತ್ವವಾದದ್ದು. ಇವುಗಳನ್ನು ಅರ್ಥೈಸಿಕೊಂಡು ಶಿಕ್ಷಕರು ಜವಾಬ್ದಾರಿಯುತವಾಗಿ ತಮ್ಮ ಹೊಣೆಗಾರಿಕೆಯನ್ನು ನಿರ್ವಹಿಸಬೇಕಾಗಿದ್ದು ಅತ್ಯವಶ್ಯಕವಾದದ್ದು ಎಂಬುದಾಗಿ ಭವಿಷ್ಯದ ಶಿಕ್ಷಕ ರಾಗಲಿರುವ ಪ್ರತಿಕ್ಷಣಾರ್ಥಿಗಳಿಗೆ ಪ್ರೇರಣದಾಯಕ ಮಾತುಗಳನ್ನಾಡಿದರು ಹಾಗೂ ಪ್ರಶೀಕ್ಷಣಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕುಮಾರಿ ದೀಕ್ಷಾ ಮ್ಯಾಥ್ಯೂ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಉಷಾ ಎಂ. ಎಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ದಿಲ್ಶಾನ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮದ ಸಂಯೋಜಕಿ ಉಪನ್ಯಾಸಕಿ ಉಮಾಶ್ರೀ ಪಿ. ಬಿ ಸ್ವಾಗತಿಸಿ, ಪ್ರಶಿಕ್ಷಣಾರ್ಥಿ ಪ್ರಿಯಾ ಎಂ ವಂದಿಸಿದರು. ಅರ್ಪಿತ ಹಾಗೂ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.