ಪುತ್ತೂರು:ಒಳಮೊಗ್ರು ಗ್ರಾಮದ ಚಿಲ್ಮೆತ್ತಾರು ನಾರಾಯಣ ರೈ ಮೇ.15ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಇವರು ಕುಂಬ್ರ ಮಂಡಲ ಪಂಚಾಯತ್ ಸದಸ್ಯರಾಗಿ , ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಏಕತ್ತಡ್ಕ ಇದರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾಗಿ , ಶ್ರೀ ವೀರಕೇಸರಿ ಸ್ಪೋರ್ಟ್ಸ್ ಕ್ಲಬ್ ನ ಗೌರವ ಸಲಹೆಗಾರರಾಗಿ , ಓಂ ಶಿವ ಭಜನಾ ಮಂದಿರ , ಓಂ ಶಿವ ಯುವಕ ಮಂಡಲದ ಗೌರವಾಧ್ಯಕ್ಷರಾಗಿ , ಊರಿನ ಅಭಿವೃದ್ಧಿಯಲ್ಲಿ ಯುವ ಸಮುದಾಯಕ್ಕೆ ಪ್ರೇರಣಾದಾಹಿಯಾಗಿ ಸೇವೆ ಸಲ್ಲಿಸಿದ್ದರು.
ಇವರ ನಿಧನಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು , ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ , ಕಾಂಗ್ರೆಸ್ ಮುಖಂಡ ಶಿವರಾಮ ಆಳ್ವ , ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ಸೇರಿದಂತೆ ಹಲವಾರು ಮಂದಿ ಅಗಲಿದ ಆತ್ಮಕ್ಕೆ ಸಂತಾಪ ಸೂಚಿಸಿದ್ದಾರೆ.
ಮೃತರು ಪತ್ನಿ ಇಂದಿರಾ , ಪುತ್ರ ಸಂದೀಪ್ ರೈ , ಸೊಸೆ ಮನೀಷಾ , ಮೊಮ್ಮಕ್ಕಳು ಸೇರಿದಂತೆ ಅಪಾರ ಕುಟುಂಬಸ್ಥರು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.