ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಸಿ.ಬಿ.ಯಸ್.ಇ. 10ನೇ ತರಗತಿಯಲ್ಲಿ ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

0

ಪುತ್ತೂರು: ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಗೆ, ಸಿ.ಬಿ.ಎಸ್.ಇ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ.100 ಫಲಿತಾoಶ ಲಭಿಸಿದ್ದು, ಇದರಲ್ಲಿ ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.

ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆದ ಹಿತೈಷಿ ಎ. ಆಳ್ವ, ಆಕಾಂಕ್ಷ್ ಪಿ. ಕೆ, ಜೆ. ತ್ರಿಶಾಲ್ ಕುಮಾರ್, ಸಿರಿ ಜಿ. ಶೆಣೈ ಮತ್ತು ಚಿರಾಗ್ ಡಿ. ಗೌಡ ಇವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಉಪಾಧ್ಯಕ್ಷ ಸತೀಶ್ ರಾವ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವಸಂತಿ. ಕೆ, ಶಾಲಾ ಸಂಚಾಲಕರಾದ ಭರತ್ ಪೈ, ಶಾಲಾ ಆಡಳಿತ ಮಂಡಳಿಯ ಸದಸ್ಯೆ ಶಂಕರಿ ಶರ್ಮ, ಪೋಷಕರು ಮತ್ತು ಶಿಕ್ಷಕರು ಉಪಸ್ಥಿರಿದ್ದು ಮಕ್ಕಳ ಮುಂದಿನ ಉತ್ತಮ ಭವಿಷ್ಯಕ್ಕೆ ಶುಭ ಹಾರೈಸಿದರು. ಶಾಲಾ ಪ್ರಾಂಶುಪಾಲರಾದ ಸಿಂಧು ವಿ. ಜಿ. ಸ್ವಾಗತಿಸಿ, ವಂದಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here