ಪುತ್ತೂರು: ವರುಣನ ಕೃಪೆ ಮತ್ತು ಲೋಕಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರ ಇದರ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.15ರಂದು ಶ್ರೀ ದೇವರಿಗೆ ಸೀಯಾಳಾಭಿಷೇಕ ನಡೆಯಿತು.
ಬೆಳಿಗ್ಗೆ ಸಂಕಲ್ಪದ ಬಳಿಕ ಸೀಯಾಳಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಶ್ರೀ ದೇವರ ಸೀಯಾಳಾಭಿಷೇಕದ ತೀರ್ಥ ಪ್ರಸಾದ ಭಕ್ತರಿಗೆ ವಿತರಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪ್ರಾರ್ಥನೆ ಮಾಡಿದರು. ಈ ಸಂದರ್ಭ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್, ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಅಶೋಕ್ ಕುಂಬ್ಳೆ, ಶ್ರೀನಿವಾಸ್, ನೀಲಂತ್, ಭುಜಂಗ ಆಚಾರ್ಯ, ಚಂದ್ರಸಿಂಗ್, ಉದಯ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.