ಪುತ್ತೂರು: ಇಂದಿನಿಂದ ಮೇ.18ರ ತನಕ ಪಡುಮಲೆ ಜುಮಾ ಮಸ್ಜಿದ್‌ನಲ್ಲಿ (ಪಮ್ಮಲ) ಮೂರು ದಿನಗಳ ಧಾರ್ಮಿಕ ಉಪನ್ಯಾಸ, ಆಂಡ್‌ನೇರ್ಚೆ ಹಾಗೂ ಕೂಟು ಪ್ರಾರ್ಥನೆ ನಡೆಯಲಿದೆ.
ಪಡುಮಲೆ ಮಸೀದಿ ವಠಾರದಲ್ಲಿ ಅಂತ್ಯವಿಶ್ರಾಂತಿ ಹೊಂದುತ್ತಿರುವ ಮಹಾನುಭಾವರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ ಆಂಡ್‌ನೇರ್ಚೆ ಕಾರ್ಯಕ್ರಮದ ಅಂಗವಾಗಿ ಧಾರ್ಮಿಕ ಉಪನ್ಯಾಸ ಮತ್ತು ಕೂಟುಪ್ರಾರ್ಥನೆ ನಡೆಯಲಿದೆ.
ಮೇ.16 ರಂದು ಮಧ್ಯಾಹ್ನ 2ಕ್ಕೆ ದ್ವಜಾರೋಹಣ ನಡೆಯಲಿದ್ದು ಕಾರ್ಯಕ್ರಮವನ್ನು ಜಮಾತ್ ಖತೀಬರಾದ ಸಂಶುದ್ದೀನ್ ದಾರಿಮಿ ಉದ್ಘಾಟಿಸಲಿದ್ದಾರೆ. ಅಬ್ದುಲ್ ಜಬ್ಬಾರ್ ಸಾಖಾಫಿ ಪಾತೂರು ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಮೇ.17 ರಂದು ಅಬ್ದುಲ್ ಅಝೀಝ್ ಅಶ್ರಫಿ ಪಾಣತ್ತೂರುರವರಿಂದ ಉಪನ್ಯಾಸ ನಡೆಯಲಿದೆ. ಮೇ.18 ರಂದು ಸಂಜೆ ಸೌಹಾರ್ದ ಸಂಗಮ ನಡೆಯಲಿದ್ದು ಪುತ್ತೂರು ಶಾಸಕ ಅಶೋಕ್ ಕುಮರ್ ರೈ ಸೌಹಾರ್ದ ಸಂಗಮ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್‌ಕುಮಾರ್, ಎಂಎಲ್ಸಿ ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ನ್ಯಾಯವಾದಿ ಪದ್ಮರಾಜ್ ಆರ್ ಪೂಜಾರಿ, ಕೆಪಿಸಿಸಿ ಪ್ರ. ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಮೊದಲಾದವರು ಭಾಗವಹಿಸಲಿದ್ದಾರೆ.
ಅದೇ ದಿನ ರಾತ್ರಿ ಸಮಾರೋಪ ಸಮಾರಂಭ ಸಮಾರಂಭ ನಡೆಯಲಿದ್ದು, ಪುತ್ತೂರು ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಸಯ್ಯದ್ ಅಹ್ಮದ್ ಪೂಕೋಯಾ ತಂಙಳ್ ದುವಾಶೀರ್ವಚನ ಮತ್ತು ಕೂಟು ಪ್ರಾರ್ಥನೆಯನ್ನು ನಡೆಸಿಕೊಡಲಿದ್ದಾರೆ. ಯು ಕೆ ಮುಹಮ್ಮದ್ ಹನೀಫ್ ನಿಝಾಮಿ ಅಲ್ ಮುರ್ಶಿದಿ ಮೊಗ್ರಾಲ್‌ರವರು ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಎಲ್ಲಾ ಕಾರ್ಯಕ್ರಮಗಳು ಜಮಾತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಹಾಜಿ ಬಡಗನ್ನೂರು ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಮಾತ್ ಕಮಿಟಿ ಪ್ರಕಟಣೆ ತಿಳಿಸಿದೆ.
Home ಇತ್ತೀಚಿನ ಸುದ್ದಿಗಳು ಇಂದಿನಿಂದ ಮೇ.18ರ ತನಕ ಪಡುಮಲೆ(ಪಮ್ಮಲ) ಜುಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ, ಕೂಟು...