ಆಲಂಕಾರು: ಆಲಂಕಾರು ಗ್ರಾ.ಪಂ ನಲ್ಲಿ ದ.ಕ ಜಿ.ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಿರ್ದೇಶನದಂತೆ ಸ್ವಚ್ಛತಾ ಆಂದೋಲನ ಮತ್ತು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಗಾರ ನಡೆಯಿತು.ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ರವಿಶಂಕರ್ ಮತ್ತು ಕಿರಿಯ ಆರೋಗ್ಯ ಸಹಾಯಕಿ ಬಿನ್ಸಿ ರವರು ಡೆಂಗ್ಯೂ ಹತೋಟಿಯ ಬಗ್ಗೆ ಮಾಹಿತಿ ನೀಡಿದರು.
ನಂತರ ಆಲಂಕಾರು ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ ಆಲಂಕಾರು ಗ್ರಾ.ಪಂ ಅಧ್ಯಕ್ಷರಾದ ಸುಶೀಲಾ, ಅಭಿವೃದ್ಧಿ ಅಧಿಕಾರಿ ಸುಜಾತ .ಕೆ
ಉಪಾಧ್ಯಕ್ಷರಾದ ರವಿ ಪೂಜಾರಿ ,ಕಾರ್ಯದರ್ಶಿ ವಸಂತ ಶೆಟ್ಟಿ, ಪಂಚಾಯತ್ ಸದಸ್ಯರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಕೊಂಡಾಡಿಕೊಪ್ಪ ಕಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯರಾದ ಜಯಂತ್, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಪಂಚಾಯತ್ ಸಿಬ್ಬಂದಿಗಳು ಗ್ರಾಮಸ್ಥರು ಭಾಗವಹಿಸಿದರು.