ಮೇ 21: ಉಪ್ಪಿನಂಗಡಿ ಶ್ರೀ ಗುರು ರಾಘವೇಂದ್ರ ಮಠದಲ್ಲಿ ದೃಢಕಲಶಾಭಿಷೇಕ

0

ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಲಕ್ಷ್ಮಣ ಸಹಿತ ಸೀತಾರಾಮ ದೇವರು, ಮುಖ್ಯಪ್ರಾಣ ದೇವರು, ಶ್ರೀ ಗುರು ರಾಘವೇಂದ್ರ ಸಾರ್ವಭೌಮರ ಬೃಂದಾವನದ ದೃಢಕಲಶಾಭಿಷೇಕವು ಮೇ 21ರಂದು ನಡೆಯಲಿದೆ.


ಪೂರ್ವಾಹ್ನ 8ರಿಂದ 9ರವರೆಗಿನ ಶುಭ ವೃಷಭ ಲಗ್ನದ ಶುಭ ಮುಹೂರ್ತದಲ್ಲಿ ಫಲಿಮಾರು ಮಠದ ಶ್ರೀ 108 ವಿದ್ಯಾಧೀಶತೀರ್ಥ ಶ್ರೀ ಪಾದಂಗಳರವರು ದೃಢಕಲಶಾಭಿಷೇಕ ನೆರವೇರಿಸಲಿದ್ದಾರೆ. ಬೆಳಗ್ಗೆ 10.30ರಿಂದ ಭಜನಾ ಸೇವೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆಯಾಗಿ, ಪ್ರಸಾದ ವಿತರಣೆ, ಮಧ್ಯಾಹ್ನ 1ರಿಂದ ಅನ್ನಪ್ರಸಾದ ವಿತರಣೆ ನಡೆಯಲಿದೆ ಎಂದು ಶ್ರೀ ಮಠದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here