ಆಲಂಕಾರು: ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

0

ಆಲಂಕಾರು: ಆಲಂಕಾರು, ಕುಂತೂರು, ಪೆರಾಬೆ, ಹಳೆನೇರೆಂಕಿ, ರಾಮಕುಂಜ ಹಾಗೂ ಕೊಯಿಲ ಗ್ರಾಮಗಳನ್ನು ಒಳಗೊಂಡ ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ದೇವರ ಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮೇ 19ರಂದು ಬೆಳಿಗ್ಗೆ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು.


ಬೆಳಿಗ್ಗೆ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಅವರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಪ್ರಾರಂಭಗೊಂಡು ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗೌಡ ಸಮಾಜದ ಕಟ್ಟುಪಾಡುಗಳ ಕುರಿತು ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಅವರು ಉಪನ್ಯಾಸ ನೀಡಿದರು.

ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರಿ ಸಂಘದ ಅಧ್ಯಕ್ಷ, ಎಸ್‌ಆರ್‌ಕೆ ಲ್ಯಾಡರ‍್ಸ್‌ನ ಮಾಲಕರೂ ಆದ ಕೇಶವ ಅಮೈ, ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಶುಭಹಾರೈಸಿದರು. ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಶಿವಣ್ಣ ಗೌಡ ಕಕ್ವೆ ಅಧ್ಯಕ್ಷತೆ ವಹಿಸಿದ್ದರು.

ಕಡಬ ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಪೂರ್ಣೇಶ್ ಗೌಡ ಬಾಬ್ಲುಬೆಟ್ಟು ಬಲ್ಯ, ಆಲಂಕಾರು ವಲಯ ಉಸ್ತುವಾರಿ ದಯಾನಂದ ಗೌಡ ಆಲಡ್ಕ, ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ರಾಮಣ್ಣ ಗೌಡ ಸುರುಳಿ, ಆಲಂಕಾರು ವಲಯ ಒಕ್ಕಲಿಗ ಗೌಡ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಮರಂಕಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪದಗ್ರಹಣ:
ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಹಿರಿಯ ಸಮಿತಿ, ಯುವ ಸಮಿತಿ ಹಾಗೂ ಮಹಿಳಾ ಸಮಿತಿಯ ಪದಾಧಿಕಾರಿಗಳಿಗೆ ಶಾಲು ಹಾಕಿ, ಹೂ ನೀಡುವ ಮೂಲಕ ಪದಗ್ರಹಣ ಸಮಾರಂಭ ನಡೆಯಿತು. ಯುವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ದೋಳ ಅವರು ಯುವ ಸಮಿತಿ ನೂತನ ಅಧ್ಯಕ್ಷ ಪ್ರದೀಪ್ ಬಾಕಿಲ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.


ಸನ್ಮಾನ:
ಆಲಂಕಾರು ವಲಯ ಯುವ ಸಮಿತಿ ಮಾಜಿ ಅಧ್ಯಕ್ಷರಾದ ಚಕ್ರಪಾಣಿ ಬಾಕಿಲ, ರಾಮಣ್ಣ ಗೌಡ ದೋಳ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆಯಲ್ಲಿ ಮೇನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಉಪ್ಪಿನಂಗಡಿಗೆ ವರ್ಗಾವಣೆಗೊಂಡ ರೇವತಿ, ಸಂಘದ ಚಟುವಟಿಕೆಗೆ ಪೂರ್ಣ ರೀತಿಯಲ್ಲಿ ಸಹಕಾರ ನೀಡಿದ ಅಶೋಕ್ ಕುಮಾರ್ ಪಜ್ಜಡ್ಕ ಅವರಿಗೆ ಶಾಲು,ಸ್ಮರಣಿಕೆ ನೀಡಿ ಗೌರವಾರ್ಪಣೆ ಮಾಡಲಾಯಿತು.


ಆಲಂಕಾರು ವಲಯ ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಪ್ರದೀಪ್ ಬಾಕಿಲ ಸ್ವಾಗತಿಸಿ, ಹಿರಿಯ ಸಮಿತಿ ಪ್ರಧಾನ ಕಾರ್ಯದರ್ಶಿ ಆನಂದ ಗೌಡ ಪಜ್ಜಡ್ಕ ವಂದಿಸಿದರು. ಪ್ರಕಾಶ್ ಬಾಕಿಲ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಳಿಕ ಸಹಭೋಜನ ನಡೆಯಿತು.

LEAVE A REPLY

Please enter your comment!
Please enter your name here