ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರಕ್ಕೆ ಅರ್ಜಿ ಆಹ್ವಾನ – ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆ

0

ಪುತ್ತೂರು: 2023-24 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವರ್ಷಂಪ್ರತಿ ನೀಡುವ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಶಾಲು, ಪದಕ, ಪ್ರಮಾಣ ಪತ್ರ ಹಾಗೂ ಪುಸ್ತಕ ಉಡುಗೊರೆಗಳನ್ನು ಗಣ್ಯ ವ್ಯಕ್ತಿಗಳ ಮೂಲಕ ನೀಡಿ ಗೌರವಿಸಲಾಗುವುದು.

ಪುತ್ತೂರು ತಾಲೂಕಿನ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಹತ್ತನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಯ ಹೆಸರು ಹಾಗೂ ಶಾಲೆಯ ಹೆಸರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ ದೂರವಾಣಿ ಸಂಖ್ಯೆ 9844401295ಗೆ ಮೇ.30ರ ಒಳಗಾಗಿ ಕಳುಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here