ಕುಂಬ್ರ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ಪುತ್ತೂರು: ಮಳೆಗಾಲದ ಮುಂಜಾಗೃತ ಕ್ರಮವಾಗಿ ಒಳಮೊಗ್ರು ಗ್ರಾಪಂ ವ್ಯಾಪ್ತಿಯ ಕುಂಬ್ರ ಪೇಟೆಯ ಜಂಕ್ಷನ್‌ನಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಕುಂಬ್ರ ಅಶ್ವತ್ಥ ಕಟ್ಟೆಯ ಬಳಿ ಇರುವ ಬಸ್ಸು ತಂಗುದಾಣದ ಸುತ್ತಮುತ್ತ ಸ್ವಚ್ಛಗೊಳಿಸಲಾಯಿತು. ಇದಲ್ಲದೆ ಗ್ರಾಮ ಪಂಚಾಯತ್ ವಠಾರ, ಕುಂಬ್ರ ಪೇಟೆ, ಬಸ್ಸು ನಿಲ್ದಾಣಗಳನ್ನು ಸ್ವಚ್ಛಗೊಳಿಸಲಾಯಿತು.

ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ನೇತೃತ್ವದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾಪಂ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು, ಎಂಬಿಕೆ, ಎಲ್‌ಸಿಆರ್‌ಪಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here