ಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟ ಇಬ್ಬರನ್ನೂ ಬಹುಮತದಿಂದ ಗೆಲ್ಲಿಸೋಣ – ಕಾರ್ಯಕರ್ತರ ಸಭೆಯಲ್ಲಿ ಬಂಟವಾಳ ಶಾಸಕ ರಾಜೇಶ್ ನಾಯಕ್ ಹೇಳಿಕೆ

0

ಬಂಟವಾಳ: ಎನ್ ಡಿಎ ಮೈತ್ರೂಕೂಟದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು, ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಂತ ಬಹುಮತದಿಂದ ಗೆಲ್ಲಿಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಬಂಟವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.

ಬಂಟವಾಳ ಸರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಹೆಚ್ಚು ನೋಂದಣಿ ಮಾಡಿದ ಕ್ಷೇತ್ರವಿದು, ಈ ಭಾಗದಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡಲು ಶ್ರಮಿಸುವುದಾಗಿ ಹೇಳಿದರು.


ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ವಿಕಾಸ್ ಪುತ್ತೂರ್ ಮಾತನಾಡಿ, ಎಲ್ಲ ಮಹಾಶಕ್ತಿ ಕೇಂದ್ರದ ಪ್ರಮುಖರು ಒಟ್ಟಾಗಿ ಕೆಲಸ ಮಾಡಬೇಕಿದೆ. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಿಂತ ವಿಭಿನ್ನವಾಗಿ ಈ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಾರ್ಯಶೀಲರಾಗಬೇಕಿದೆ, ಪ್ರತಿ ಮತದಾರರನ್ನು ಮತಗಟ್ಟೆಗೆ ಕರೆ ತಂದು ಮೊದಲ ಪ್ರಾಶಸ್ತ್ಯದ ಮತ ಹಾಕಿಸಬೇಕು ಎಂದು ಹೇಳಿದರು.

ಕ್ಯಾಪ್ಟನ್ ಬ್ರಿಜೇಶ್ ಮಾತನಾಡಿ, ಬೇರೆಲ್ಲಾ ಚುನಾವಣೆಗಿಂತ ಪರಿಷತ್ ಚುನಾವಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು, ಕಾರ್ಯಕರ್ತರು ಮತದಾರರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಬೇಕು, ಈ ಕ್ಷೇತ್ರಗಳು ಭಾವನಾತ್ಮಕವಾಗಿ ಶಕ್ತಿ ನೀಡಿವೆ, ನಮ್ಮ ಸಂಘಟನೆ ಗಟ್ಟಿಯಾಗಿದ್ದು, ಅಭ್ಯರ್ಥಿಗಳನ್ನು ಗೆಲ್ಲಿಸುವ ಅನಿವಾರ್ಯತೆ ಇದೆ, ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದರು.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಸಂಘಟನೆಯ ಶಕ್ತಿಯ ಕೇಂದ್ರ ಬಿಂದುವೇ ಕಾರ್ಯಕರ್ತರು, ತಾವೇ ಅಭ್ಯರ್ಥಿ ಎಂದು ತಿಳಿದು ಮತ ಕೇಳಿ, ಪದವೀದರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬೇಕಿದ್ದು, ಪಠ್ಯ ಪುಸ್ತಕದ ರಾಜಕೀಯ ಸಲ್ಲದು, ದೇಶದ ಮತ್ತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಜೀವನ ಮೌಲ್ಯದ ಶಿಕ್ಷಣವನ್ನು ಕೊಡಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರಜ್ಞಾವಂತ ಮತದಾರರು ಸಮರ್ಥ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಹಾಗೂ ಕುಲಗೆಟ್ಟ ಮತಗಳ ಆಗದಂತೆ ನಾವು ಮತದಾರರನ್ನು ಜಾಗೃತಗೊಳಿಸಬೇಕಿದೆ ಎಂದು ಹೇಳಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕಂಪಲ, ಕ್ಯಾಪ್ಟನ್ ಗಣೇಶ್ ಕಾರ್ಣೀಕ್, ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಶಾಸಕ ರಾಜೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸಂಧ್ಯಾ ಪೈ, ದೇವಪ್ಪ ಪೂಜಾರಿ, ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷರಾದ ಹರಿಕೃಷ್ಣ ಬಂಟವಾಳ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕಂಪಲ, ಸಂಘಟನಾ ಪ್ರಬಾರಿ ಪೂಜಾ ಪೈ, ಶಿಕ್ಷಕರ ಕ್ಷೇತ್ರದ ಸಹ ಸಂಚಾಲಕರಾದ ಡಾ.ಮಂಜುಳಾ ಎಸ್. ರಾವ್, ಮಾಜಿ ಸಚಿವ ನಾಗರಾಜ್ ಶೆಟ್ಟಿ, ರಾಜ್ಯ ಪ್ರಕೋಷ್ಟದ ಕಾರ್ಯದರ್ಶಿ ಆರ್.ಸಿ.ನಾರಾಯಣ್, ಜೆಡಿಎಸ್ ನ ಯುವ ನಾಯಕ ರಕ್ಷಿತ್ ಸುವರ್ಣ, ನಾಯಕರಾದ ಮೋನಪ್ಪ ಭಂಡಾರಿ, ದಿನೇಶ್ ಅಮಟೂರ್ ಮತ್ತಿತರರು ಉಪಸ್ಥಿತರಿದ್ದರು. ಬಂಟವಾಳ ಬಿಜೆಪಿ ಅಧ್ಯಕ್ಷ ರ್.ಚನ್ನಪ್ಪ ಕೋಟ್ಯಾನ್ ಅವರು ಸ್ವಾಗತಿಸಿದರು,

LEAVE A REPLY

Please enter your comment!
Please enter your name here