ಎಸ್‌ಎಸ್‌ಎಲ್‌ಸಿ: ಕುಂತೂರುಪದವು ಸಂತಜಾರ್ಜ್ ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ಕಡಬ: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂತೂರು ಪದವು ಸಂತಜಾರ್ಜ್ ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ ಬಂದಿದೆ.
ಶಾಲೆಯಿಂದ ಪರೀಕ್ಷೆಗೆ ಹಾಜರಾದ 33 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. 5 ಮಂದಿ ವಿಶಿಷ್ಠ ಶ್ರೇಣಿ, 15 ಮಂದಿ ಪ್ರಥಮ ಶ್ರೇಣಿಯಲ್ಲಿ, 12 ಮಂದಿ ದ್ವಿತೀಯ ಶ್ರೇಣಿಯಲ್ಲಿ ಹಾಗೂ 1 ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಹಿತಾ ಎನ್.ಆರ್. 581, ಸುಜಿತ್ 566, ಮರಿಯಮತ್ ನಿಹಾ 549, ಮಹಮ್ಮದ್ ರೌಶಾನ್ 536 ಹಾಗೂ ಡಿ.ಜಿ.ಮೋಕ್ಷಿತಾ 536 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲಾ ಮುಖ್ಯಶಿಕ್ಷಕ ಹರಿಶ್ಚಂದ್ರ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here